advertise here

Search

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ


ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮುಂಜಾನೆ ಮಳೆ ಆಗಿದ್ದು, ದಿನದ ಬಹುತೇಕ ಸಮಯ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ALSO READ :  ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಏಳು ಜನರ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ!

ಬಾಳೆಹೊನ್ನೂರು, ಕಾರ್ಕಳ, ನಂಜನಗೂಡು, ಜಯಪುರ, ಬೆಳ್ಳೂರು, ಸೋಮವಾರಪೇಟೆ, ಸರಗೂರು, ಉಪ್ಪಿನಂಗಡಿ, ಕದ್ರಾ, ಶಿರಾಲಿ, ಹಳಿಯಾಳ, ಹಾವೇರಿ, ಚಾಮರಾಜನಗರ, ಕುಶಾಲನಗರ, ನಾಪೊಕ್ಲು, ಕಮ್ಮರಡಿ, ಹುಣಸೂರಿನಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆಯಾಗಿದೆ.

ಹಾರಂಗಿ, ಸಿದ್ದಾಪುರ, ಉಡುಪಿ, ಯಲ್ಲಾಪುರ, ಸಂಕೇಶ್ವರ, ಹಿಡಕಲ್, ಚಿಕ್ಕೋಡಿ, ಯಡವಾಡ, ಮಹಾಲಿಂಗಪುರ, ಭಾಗಮಂಡಲ, ಪೊನ್ನಂಪೇಟೆ, ಎಚ್​ಡಿಕೋಟೆ, ಮದ್ದೂರು, ದಾವಣಗೆರೆ, ಗುಂಡ್ಲುಪೇಟೆ, ನಾಗಮಂಗಲದಲ್ಲಿ ಮಳೆಯಾಗಿದೆ.


Political News

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

Scroll to Top