ಕಲಬುರಗಿ ಶಾಲೆಯಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ ಶಿಕ್ಷಕ!

ಕಲಬುರಗಿ ಶಾಲೆಯಲ್ಲೇ ಅತ್ಯಾಚಾರಕ್ಕೆ ಯತ್ನಿಸಿದ ಶಿಕ್ಷಕ!

ಶಾಲೆಯ ತರಗತಿಯಲ್ಲೇ ಬಾಲಕಿ ಮೇಲೆ ಶಿಕ್ಷಕ ಅತ್ಯಾಚಾರಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ಕಲಬುರಗಿಯಲ್ಲಿ ನಡೆದಿದ್ದು, ಫೋಕ್ಸೊ ಕಾಯ್ದೆಯಡಿ ಶಿಕ್ಷಕನನ್ನು ಬಂಧಿಸಲಾಗಿದೆ.

ಜಿಲ್ಲೆಯ ಆಳಂದ ತಾಲೂಕಿನ ನಿಂಬರಗಾ ಪೊಲೀಸ್ ಠಾಣಾ ವ್ಯಾಪ್ತಿಯ ಸರಕಾರಿ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದೆ.

ಮಂಗಳವಾರ ಮಧ್ಯಾಹ್ನ ಊಟ ಮುಗಿಸಿ ಬಾಲಕಿ ತರಗತಿಗೆ ತೆರಳಿದ್ದ ವೇಳೆ ಶಿಕ್ಷಕ ಆಕೆಯ ಮೇಲೆ ಹಲ್ಲೆ ನಡೆಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಗಲಾಟೆ ಮಾಡದಂತೆ ಬೆದರಿಸಿ ಅತ್ಯಾಚಾರಕ್ಕೆ ಶಿಕ್ಷಕ ಯತ್ನಿಸಿದ್ದಾನೆ. ಆದರೆ, ಬಾಲಕಿ ಪ್ರತಿರೋಧ ವ್ಯಕ್ತಪಡಿಸಿ ಸಹಾಯಕ್ಕಾಗಿ ಕಿರುಚಲು ಆರಂಭಿಸಿದಾಗ ಶಿಕ್ಷಕ ಶಾಲಾ ಆವರಣದಿಂದ ಪರಾರಿಯಾಗಿದ್ದಾನೆ.

ಸಂತ್ರಸ್ತೆ ತನ್ನ ಮನೆಗೆ ತೆರಳಿ ಘಟನೆಯ ಬಗ್ಗೆ ಪೋಷಕರಿಗೆ ತಿಳಿಸಿದ್ದರಿಂದ ಪೋಷಕರು ಮುಖ್ಯೋಪಾಧ್ಯಾಯರನ್ನು ವಿಚಾರಿಸಿ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಪರಾರಿಯಾಗಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ತಡೆ ಕಾಯ್ದೆ (ಪೋಕ್ಸೊ) ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *