ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ!

ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ!

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಗುರುವಾರ ಮುಂಜಾನೆ ಚಾರ್ಮಾಡಿ ಘಾಟ್ ನ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿದೆ. ಮಳೆ ನೀರಿನ ಜೊತೆ ರಸ್ತೆಗೆ ಕಲ್ಲುಗಳು ತೇಲಿಕೊಂಡು ಬಂದಿವೆ. ಚಾರ್ಮಾಡಿ ಘಾಟಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾಹನ‌ ಸಂಚಾರ ನಿಧಾನಗತಿಯಲ್ಲಿ ಸಾಗಿದ್ದು, ಯಾವುದೇ ತೊಂದರೆ ಇಲ್ಲ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ಅಡಿಗಟ್ಟಲೇ ನೀರು ಹರಿಯುತ್ತಿದೆ.

ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಯನ್ನು ಚಾರ್ಮಾಡಿ ಘಾಟ್ ಸಂಪರ್ಕಿಸುತ್ತದೆ. ಬೆಂಗಳೂರಿನಿಂದ ದಕ್ಷಿಣ ಕನ್ನಡ, ಉಡುಪಿ ಭಾಗಗಳಿಗೆ ತೆರಳುವ ಮಂದಿ ಶಿರಾಡಿ ಮೂಲಕ ತೆರಳುತ್ತಿದ್ದರು. ಆದರೆ ಶಿರಾಡಿ ಘಾಟಿಯಲ್ಲಿ ಅಲ್ಲಲ್ಲಿ ಗುಡ್ಡ ಕುಸಿತದ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದೆ.

 

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *