siddaramiah

ಆಲಮಟ್ಟಿಗೆ ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ

ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹತಿಯುತ್ತಿದ್ದು, ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಆಗಸ್ಟ್ 21ರಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಆಲಮಟ್ಟಿ ಜಲಾಶಯ 9 ಜಿಲ್ಲೆಗಳಿಗೆ ನೀರು ಪೂರೈಸುವ ಸಾಮರ್ಥ್ಯ ಹೊಂದಿದ್ದು, ಈ ಜಲಾಶಯದಲ್ಲಿ ವಿದ್ಯುತ್​ ಉತ್ಪಾದನೆ ಕೂಡಾ ಮಾಡಲಾಗುತ್ತದೆ.

519.60 ಮೀಟರ್‌ ಎತ್ತರದಲ್ಲಿ 123.08 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಆಲಮಟ್ಟಿ ಜಲಾಶಯದಲ್ಲಿ ಮಂಗಳವಾರ ಬೆಳಗ್ಗೆ 123.08 ಟಿಎಂಸಿ ನೀರು ಸಂಗ್ರಹವಾಗಿದೆ. ಒಳ ಹರಿವು 19,968 ಕ್ಯೂಸೆಕ್ ಹೊಂದಿದ್ದು, ಅಷ್ಟೇ ಪ್ರಮಾಣದ ಅಂದರೆ 19,968 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಬೆಳಗ್ಗೆ 10 ಗಂಟೆಗೆ ಹೆಚ್​​ಎಎಲ್​ನಿಂದ ವಿಮಾನದಲ್ಲಿ ಹೊರಟು 10:50ಕ್ಕೆ ಕೊಪ್ಪಳದ ಗಿಣಿಗೇರಾ ಏರ್​ಸ್ಟ್ರಿಪ್​ಗೆ ತಲುಪಲಿದ್ದಾರೆ. ನಂತರ ಗಿಣಿಗೇರಾದಿಂದ ರಸ್ತೆ ಮಾರ್ಗವಾಗಿ ವಿಜಯಪುರ ಜಿಲ್ಲೆಯ ಆಲಮಟ್ಟಿಗೆ ಮಧ್ಯಾಹ್ನ 12.30ಕ್ಕೆ ತಲುಪಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಆಲಮಟ್ಟಿ ಜಲಾಯಶದ ಬಳಿ ಮೊದಲಿಗೆ ಕೃಷ್ಣಾ ನದಿಗೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಬಾಗಿನ ಅರ್ಪಿಸಲಿದ್ದಾರೆ. ಬಳಿಕ ಮದ್ಯಾಹ್ನ 3 ಗಂಟೆಗೆ ರಸ್ತೆ ಮಾರ್ಗವಾಗಿ ಮತ್ತೆ ಗಿಣಿಗೇರಾಕ್ಕೆ ತೆರಳಿ, ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್​ ಆಗಲಿದ್ದಾರೆ.

ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಉಸ್ತುವಾರಿ ಎಂ ಬಿ ಪಾಟೀಲ್, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್​.ಬಿ ತಿಮ್ಮಾಪುರ ಸೇರಿದಂತೆ ಉಭಯ ಜಿಲ್ಲೆಯ ಶಾಸಕರು ಅಧಿಕಾರಿಗಳು ಭಾಗಿಯಾಗಲಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *