ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇನ್ನೆರಡು ದಿನದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ: ದಯಾನಂದ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು 17 ಸಹಚರರ ವಿರುದ್ಧದ ಕೊಲೆ ಪ್ರಕರಣದಲ್ಲಿ ಇನ್ನೆರಡು ದಿನದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಾರ್ಜ್ ಶೀಟ್ ಸಿದ್ಧವಾಗಿದ್ದು, ಕೆಲವು ಸಣ್ಣಪುಟ್ಟ ತಪ್ಪುಗಳು ಇವೆ. ಇದನ್ನು ಸರಿಪಡಿಸಿ ಇನ್ನೆರಡು ದಿನದಲ್ಲಿ ಪ್ರಾಥಮಿಕ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದರು.

ಪ್ರಕರಣದ ಲ್ಯಾಬ್ ವರದಿ ಈಗ ಕೈ ಸೇರಿದೆ. ಎಸ್ ಪಿ ನೇತೃತ್ವದಲ್ಲಿ ಚಾರ್ಜ್ ಶೀಟ್ ಸಿದ್ದವಾಗುತ್ತಿದೆ. ಇದುವರೆಗೂ ಲಭಿಸಿದ ಮಾಹಿತಿ ಆಧರಿಸಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗುವುದು ಎಂದರು.

ಪೊಲೀಸರು 4500 ಪುಟಗಳ ಚಾರ್ಜ್ ಶೀಟ್ ಸಿದ್ಧಪಡಿಸಿದ್ದು, ಮಂಗಳವಾರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಬೇಕಿತ್ತು.

ಚಿತ್ರದುರ್ಗದ ರೇಣುಕಾಸ್ವಾ ಕೊಲೆ ಪ್ರಕರಣದಲ್ಲಿ ಕಳೆದ ಎರಡು ತಿಂಗಳಿಂದ ವಿಚಾರಣೆ ನಡೆಸುತ್ತಿರುವ ಪೊಲೀಸರು ಸುಮಾರು 200ಕ್ಕೂ ಹೆಚ್ಚು ಸಾಕ್ಷ್ಯಗಳು ಹಾಗೂ ಹೇಳಿಕೆಗಳನ್ನು ಸಂಗ್ರಹಿಸಿದ್ದಾರೆ.

ಕೊಲೆ ನಡೆದ ಘಟನೆಯ ವಿವರ, ಕೊಲೆಯಾದ ಸಂದರ್ಭದಲ್ಲಿ ಯಾರೆಲ್ಲಾ ಸ್ಥಳದಲ್ಲಿ ಇದ್ದರು? ಆರೋಪಿಗಳ ಹೇಳಿಕೆ ಹಾಗೂ ಪೂರಕ ಸಾಕ್ಷ್ಯ ಸೇರಿದಂತೆ ಪ್ರತಿಯೊಂದು ಸಾಕ್ಷ್ಯವನ್ನು ವೀಡಿಯೊದಲ್ಲಿ ಸಂಗ್ರಹಿಸಿರುವ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆಗೆ ಮುಂದಾಗಿದ್ದಾರೆ.

ದರ್ಶನ್ ಹಾಗೂ ಸಹಚರರನ್ನು ಪೊಲೀಸರು ಬಂಧಿಸಿ ಸುಮಾರು 2 ತಿಂಗಳು ಕಳೆಯುತ್ತಾ ಬಂದಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಇದೀಗ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿದೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *