padma raj
padma raj

ಕನ್ನಡದ ಖ್ಯಾತ ಪೋಷಕ ನಟಿ ಪದ್ಮಜಾರಾವ್ ಗೆ 3 ತಿಂಗಳು ಜೈಲು ಶಿಕ್ಷೆ!

ಕನ್ನಡದ ಖ್ಯಾತ ಪೋಷಕ ನಟಿ ಪದ್ಮಜಾ ರಾವ್ ಅವರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ 3 ತಿಂಗಳು ಜೈಲು ಶಿಕ್ಷೆ ಮತ್ತು 40 ಲಕ್ಷ ರೂ. ದಂಡ ವಿಧಿಸಿ ಮಂಗಳೂರಿನ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ಮಂಗಳೂರಿನ ವೀರೇಂದ್ರ ಶೆಟ್ಟಿ ಬಳಿ 40 ಲಕ್ಷ ರೂ. ಸಾಲ ಪಡೆದಿದ್ದ ಪದ್ಮಜಾ ರಾವ್ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಆದರೆ ಸಾಲ ಮರುಪಾವತಿಯೂ ಮಾಡದೇ ವಂಚಿಸಿದ್ದರು. ಈ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನ ಜೆಎಂಎಫ್‌ಸಿ ನ್ಯಾಯಾಲಯ ಸುದೀರ್ಘ ವಿಚಾರಣೆ ನಂತರ 3 ತಿಂಗಳು ಜೈಲು ಶಿಕ್ಷೆ ಪ್ರಕಟಿಸಿದೆ.

ವೀರೂ ಟಾಕೀಸ್ ಸಂಸ್ಥೆಯ ಮಾಲೀಕ ವೀರೇಂದ್ರ ಶೆಟ್ಟಿ ಬಳಿ ಪದ್ಮಜಾ ರಾವ್ ಅವರು 40 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಭದ್ರತೆ ದೃಷ್ಟಿಯಿಂದ ಪದ್ಮಜಾ ರಾವ್ ಚೆಕ್ ನೀಡಿದ್ದರು. ಇದು ನಡೆದಿದ್ದು 2020ರ ಜೂನ್‌ 17ರಂದು. ಆದರೆ, ಪದ್ಮಜಾ ಅವರು ಹಣ ಪಾವತಿ ಮಾಡಿಲ್ಲ.

ವಿರೇಂದ್ರ ಶೆಟ್ಟಿ ಅವರು ನ್ಯಾಯಾಲಯದ ಮೊರೆ ಹೊಗಿದ್ದರು. ಈ ಮೊದಲು ವಿಚಾರಣೆಗೆ ಹಾಜರಾದ ಪದ್ಮಜಾ ರಾವ್ ಅವರು ಬೇರೆಯದೇ ರೀತಿಯ ಹೇಳಿಕೆ ನೀಡಿದ್ದರು. ನಾನು ಸಾಲವನ್ನೇ ಪಡೆದಿಲ್ಲ ಎಂದಿದ್ದ ಅವರು, ಚೆಕ್ ನೀಡಿದ ವಿಚಾರವನ್ನೂ ಅಲ್ಲಗಳೆದಿದ್ದರು. ಜೊತೆಗೆ ಪದ್ಮಜಾ ರಾವ್ ಅವರ ಚೆಕ್​ ಕದ್ದು ಸಹಿ ನಕಲು ಮಾಡಿದ ಆರೋಪವನ್ನು ಪದ್ಮಜಾ ರಾವ್ ಮಾಡಿದ್ದರು. ಇದಕ್ಕೆ ಸಂಬಂಧಿಸಿ ಸಾಕ್ಷಿಗಳನ್ನು ಒದಗಿಸಲು ಪದ್ಮಜಾ ವಿಫಲರಾಗಿದ್ದರು.

ಪದ್ಮಜಾ ರಾವ್ 40.20ಲಕ್ಷ ರೂಪಾಯಿ ದಂಡವನ್ನು ಪಾವತಿಸಬೇಕಿದೆ. ಇದರಲ್ಲಿ 40.17 ಲಕ್ಷ ರೂಪಾಯಿ ಹಣವನ್ನು ದೂರುದಾರನಿಗೆ ಕೊಡಬೇಕಿದೆ. ಉಳಿದ 3 ಸಾವಿರ ರೂಪಾಯಿ ಹಣವನ್ನು ಸರ್ಕಾರಕ್ಕೆ ತುಂಬಬೇಕು. ಉಳಿದಂತೆ ಸಾದಾ ಕಾರಗೃಹ ಶಿಕ್ಷೆ ಅನುಭವಿಸಬೇಕಿದೆ.

ಪದ್ಮಜಾ ರಾವ್ ಮುಂಗಾರು ಮಳೆ ಸೇರಿದಂತೆ ಹಲವಾರು ಸೂಪರ್ ಹಿಟ್ ಕನ್ನಡ ಚಿತ್ರಗಳಲ್ಲಿ ನಟಿಸಿದ್ದು ಸದ್ಯ ಅವರು ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *