natwar singh

ಮಾಜಿ ಕೇಂದ್ರ ಸಚಿವ ನಟವರ್ ಸಿಂಗ್ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದ ಕೆ.ನಟವರ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ದೆಹಲಿ ಸಮೀಪದ ಗುರ್ ಗಾಂವ್ ನ ಖಾಸಗಿ ಆಸ್ಪತ್ರೆಗೆ ಕೆಲವು ವಾರಗಳ ಹಿಂದೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ರಾಜಸ್ಥಾನ್ ನ ಭಾರತ್ ಪುರ್ ಜಿಲ್ಲೆಯಲ್ಲಿ 1931ರಲ್ಲಿ ಜನಿಸಿದ್ದ ನಟವರ್ ಸಿಂಗ್, ಮನಮೋಹನ್ ಸಿಂಗ್ ಪ್ರಧಾನಿ ಆಗಿದ್ದ ಯುಪಿಎ-1ರ ಅವಧಿಯಲ್ಲಿ ಕೇಂದ್ರ ವಿದೇಶಾಂಗ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

1966-71ರ ಅವಧಿಯಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಕಚೇರಿ ಪಕ್ಕದಲ್ಲೇ ಕಚೇರಿ ಹೊಂದಿದ ಹೆಗ್ಗಳಿಕೆ ಹೊಂದಿದ್ದ ನಟವರ್ ಸಿಂಗ್ ಪಾಕಿಸ್ತಾನದ ರಾಯಭಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.

ರಾಜಕೀಯ ಅಲ್ಲದೇ ಬರಹಗಾರರೂ ಆಗಿದ್ದ ನಟವರ್ ಸಿಂಗ್ ಹಲವಾರು ಪುಸ್ತಕಗಳನ್ನು ಬರೆದಿದ್ದು, 1984ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *