ಗ್ಯಾರಂಟಿ ಯೋಜನೆಗಳಿಂದ 1 ಕೋಟಿ ಜನರ ಬಡತನಕ್ಕೆ ಮುಕ್ತಿ: ಈಶ್ವರ್ ಖಂಡ್ರೆ

ಗ್ಯಾರಂಟಿ ಯೋಜನೆಗಳಿಂದ 1 ಕೋಟಿ ಜನರ ಬಡತನಕ್ಕೆ ಮುಕ್ತಿ: ಈಶ್ವರ್ ಖಂಡ್ರೆ

ಕಾಂಗ್ರೆಸ್ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದರಿಂದ 1 ಕೋಟಿಗೂ ಅಧಿಕ ಜನರು ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದಾಗಿ ಜನರಿಗೆ ಹಣದ ಹರಿವು ನಿರಂತರವಾಗಿದ್ದು, ಜನರ ಖರೀದಿಸುವ ಶಕ್ತಿ ಹೆಚ್ಚಾಗಿದೆ. ಇದು ರಾಜ್ಯದ ಪ್ರಗತಿಗೂ ಪರೋಕ್ಷವಾಗಿ ಪ್ರಯೋಜವಾಗುತ್ತಿದೆ. ಹೀಗಾಗಿ ಗ್ಯಾರಂಟಿ ಯೋಜನೆ ಯಾವುದೇ ಬದಲಾವಣೆ ಇಲ್ಲದೆ. ಪ್ರಸಕ್ತ ಸ್ವರೂಪದಲ್ಲಿ ಮುಂದುವರಿಯುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬಡವರು, ದುರ್ಬಲರು, ವಂಚಿತರು, ಶೋಷಿತರ ಪರವಾಗಿ ನಿಂತಿದೆ. ಅವರ ಸರ್ವಾಂಗೀಣ ಅಭಿವೃದ್ಧಿಗಾಗಿ, ಕಲ್ಯಾಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಅವರು ಹೇಳಿದರು

ನಾವು ಎಲ್ಲ ಸಮಾಜಮುಖಿ ಮತ್ತು ಸಾಮಾಜಿಕ ಕಲ್ಯಾಣ ಯೋಜನೆಗಳನ್ನು ಆರ್ಥಿಕ ಲಾಭ ನಷ್ಟದಿಂದ ನೋಡಬಾರದು. ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆ ಮುಂದುವರಿಯುತ್ತದೆ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅದು ಮೂಲ ಸ್ವರೂಪದಲ್ಲೇ ಮುಂದುವರಿಯುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *