national awadr
national awadr

ರಿಷಭ್ ಶೆಟ್ಟಿಗೆ ಒಲಿದ ರಾಷ್ಟ್ರಪ್ರಶಸ್ತಿ: ಕೆಜಿಎಫ್-2 ಕನ್ನಡದ ಅತ್ಯುತ್ತಮ ಚಿತ್ರ!

ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ ಕಾಂತಾರ ಚಿತ್ರದ ಅಭಿನಯಕ್ಕಾಗಿ ರಿಷಭ್ ಶೆಟ್ಟಿ ರಾಷ್ಟ್ರೀಯ ಶ್ರೇಷ್ಠ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದೇ ವೇಳೆ ಯಶ್ ಅಭಿನಯದ ಕೆಜಿಎಫ್-2 ಚಿತ್ರ ಕನ್ನಡದ ಅತ್ಯುತ್ತಮ ಚಿತ್ರ ಸೇರಿ 2 ವಿಭಾಗಗಳಲ್ಲಿ ಪ್ರಶಸ್ತಿ ಬಾಚಿಕೊಂಡಿದೆ.

ದೆಹಲಿಯಲ್ಲಿ ನಡೆದ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ 70ನೇ ರಾಷ್ಟ್ರೀಯ ಪ್ರಶಸ್ತಿ ಪ್ರಕಟಿಸಲಾಗಿದೆ. ಅಕ್ಟೋಬರ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ರಿಷಭ್ ಶೆಟ್ಟಿ ಮತ್ತು ಮಲಯಾಳಂ ಖ್ಯಾತ ನಟ ಮಮ್ಮುಟಿ ನಡುವೆ ಶ್ರೇಷ್ಠ ನಟ ಪ್ರಶಸ್ತಿಗಾಗಿ ಪೈಪೋಟಿ ನಡೆದಿತ್ತು. ಆದರೆ ಅಂತಿಮವಾಗಿ ಶ್ರೇಷ್ಠ ನಟ ಪ್ರಶಸ್ತಿ ರಿಷಭ್ ಶೆಟ್ಟಿಗೆ ಒಲಿದಿದೆ.

ಎಸ್ ಎಸ್ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಚಿತ್ರ 6 ವಿಭಾಗಗಳಲ್ಲಿ ಪ್ರಶಸ್ತಿ ಬಾಚಿಕೊಂಡಿದೆ. ರಾಕೆಟರಿ: ನಂಬಿ ಎಫೆಕ್ಟ್ ಶ್ರೇಷ್ಠ ಫೀಚರ್ ಫಿಲ್ಮ್ ಪ್ರಶಸ್ತಿಗೆ ಪಾತ್ರವಾಗಿದೆ.

ಕೆಜಿಎಫ್-2 ಚಿತ್ರಕ್ಕೆ ಎರಡು ಪ್ರಶಸ್ತಿ ಲಭಿಸಿದ್ದು, ಕನ್ನಡದ ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ಸಾಹಸಕ್ಕಾಗಿ ಪ್ರಶಸ್ತಿ ಲಭಿಸಿದೆ. ಯಶ್ ಅಭಿನಯದ ಕೆಜಿಎಫ್ ಚಿತ್ರ ದೇಶ ವಿದೇಶಗಳಲ್ಲಿ ಅಮೋಘ ಪ್ರದರ್ಶನ ಕಾಣುವ ಮೂಲಕ 1000 ಕೋಟಿ ರೂ. ಗಳಿಕೆ ಮಾಡಿ ದಾಖಲೆ ಬರೆದಿತ್ತು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *