ಸಿದ್ದರಾಮಯ್ಯಗೆ ಹಿಂದುಳಿದ, ದಲಿತ ಸ್ವಾಮೀಜಿಗಳ ಬೇಷರತ್ ಬೆಂಬಲ!

ಸಿದ್ದರಾಮಯ್ಯಗೆ ಹಿಂದುಳಿದ, ದಲಿತ ಸ್ವಾಮೀಜಿಗಳ ಬೇಷರತ್ ಬೆಂಬಲ!

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಭೇಷರತ್ ಬೆಂಬಲ ಘೋಷಿಸಿದೆ.

ಭಾನುವಾರ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದ ಸ್ವಾಮೀಜಿಗಳು ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು.

ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿದ ಸ್ವಾಮೀಜಿಗಳು ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದರು.

ಕನಕ ಪೀಠ ಕಾಗಿನೆಲೆ ಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿ, ಹೊಸದುರ್ಗದ ಶ್ರೀ ಜಗದ್ಗುರು ಕುಂಚಿಟಿಗ ಮಾಸಂಸ್ಥಾನ ಮಠದ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ, ಚಿತ್ರದುರ್ಗದ ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದರ ಚನ್ನಯ ಗುರುಪೀಠ ಚಿತ್ರದುರ್ಗದ ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ, ಭಗಿರಥ ಪೀಠ ಮಧುರೆಯ ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕನಕ ಗುರುಪೀಠ ಹೊಸದುರ್ಗದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ನಾರಾಯಣ ಗುರುಪೀಠ ಶಿವಮೊಗ್ಗದ ಶ್ರೀ ರೇಣುಕಾನಂದ ಸ್ವಾಮೀಜಿ, ಮಡಿವಾಳ ಗುರುಪೀಠ ಚಿತ್ರದುರ್ಗದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿಯ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಸರೂರು ವಿಜಯನಗರದ ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು ಬೆಂಬಲ ಪ್ರಕಟಿಸಿದರು.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *