ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ರೋಹಿತ್ ಶರ್ಮ ಸಾರಥ್ಯದ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ಶುಕ್ರವಾರ ರಾತ್ರಿ ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಅಕ್ಟೋಬರ್ 16ರಂದು ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ. ತಂಡದಲ್ಲಿ ಕೆಎಲ್ ರಾಹುಲ್, ಶುಭಮನ್ ಗಿಲ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದು, 157 ಕಿ.ಮೀ. ವೇಗದ ಬೌಲರ್ ಮಯಂಕ್ ಯಾದವ್ ಅವರನ್ನು ಮೀಸಲು ಆಟಗಾರರನ್ನಾಗಿ ಆಯ್ಕೆ ಮಾಡಲಾಗಿದೆ.
ಭಾರತ ಟೆಸ್ಟ್ ತಂಡ
ರೋಹಿತ್ ಶರ್ಮ (ನಾಯಕ), ಜಸ್ ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮದ್ ಸಿರಾಜ್, ಅಕ್ಷ್ ದೀಪ್.
ಮೀಸಲು ಆಟಗಾರರು: ಮಯಾಂಕ್ ಯಾದವ್, ಹರ್ಷಿತ್ ರಾಣಾ, ನಿತಿಶ್ ಕುಮಾರ್ ರೆಡ್ಡಿ ಮತ್ತು ಪ್ರಸಿದ್ಧ ಕೃಷ್ಣ.