advertise here

Search

14 ಲಕ್ಷ ಅನರ್ಹ ಪಡಿತರ ಚೀಟಿ ರದ್ದು: ಸಚಿವ ಕೆಎಚ್ ಮುನಿಯಪ್ಪ


ರಾಜ್ಯದಲ್ಲಿ ಸುಮಾರು 14 ಲಕ್ಷ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿದ್ದು, ಈಗಾಗಲೇ 3.64 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.

ಸರ್ಕಾರಿ ನೌಕರರ 2,964 ಅನರ್ಹ ಕಾರ್ಡ್‌ಗಳನ್ನು ರದ್ದುಗೊಳಿಸಲಾಗಿದೆ. ರಾಜ್ಯದಲ್ಲಿ 4.35 ಕೋಟಿ ಫಲಾನುಭವಿಗಳು 1.51 ಕೋಟಿ ಪಡಿತರ ಕಾರ್ಡ್ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಅಹರ್ನತೆಗೆ ಮಾನದಂಡವೇನು?

6 ತಿಂಗಳವರೆಗೆ ಪಡಿತರ ಪಡೆಯದಿರುವವರು, ಒಂದು ವರ್ಷದವರೆಗೆ ನೇರ ನಗದು ವರ್ಗಾವಣೆ ಸೌಲಭ್ಯ ಪಡೆಯದಿರುವವರು ಮತ್ತು ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ವಾರ್ಷಿಕ ಆದಾಯ ಹೊಂದಿರುವವರನ್ನು ಅನರ್ಹರೆಂದು ಪರಿಗಣಿಸಲಾಗುತ್ತಿದೆ.

ಅರ್ಹ ಫಲಾನುಭವಿಗಳು ಸೌಲಭ್ಯ ಪಡೆಯದೇ ಕಾರ್ಡ್​ ರದ್ದಾದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕಾರ್ಡ್‌ಗಳನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಅನ್ನಭಾಗ್ಯ ಹಣ ವರ್ಗಾವಣೆ ಮುಂದುವರಿಕೆ ಪ್ರತಿ ಅನ್ನಭಾಗ್ಯ ಫಲಾನುಭವಿಗೆ ಐದು ಕೆಜಿ ಅಕ್ಕಿ ಬದಲಿಗೆ 170 ರೂ.ಗಳ ನೇರ ನಗದು ವರ್ಗಾವಣೆ (ಡಿಬಿಟಿ) ಮುಂದುವರಿಯಲಿದೆ ಎಂದು ಮುನಿಯಪ್ಪ ತಿಳಿಸಿದರು.

ALSO READ :  ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ ಅರೆಸ್ಟ್: ಎಂಪಿ ಸೀಟು ಕೊಡಿಸ್ತೀನಿ ಅಂತ 2 ಕೋಟಿ ವಂಚನೆ!

ರಾಜ್ಯಕ್ಕೆ ಕೆಜಿ ಅಕ್ಕಿಯನ್ನು 28 ರೂ.ಗೆ ಮಾರಾಟ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದೂ ಅವರು ಹೇಳಿದರು. ಹೆಚ್ಚುವರಿಯಾಗಿ ಅಗತ್ಯವಿರುವ 20,000 ಮೆಟ್ರಿಕ್ ಟನ್ ಅಕ್ಕಿಯನ್ನು ರಾಜ್ಯ ಸರ್ಕಾರ ಬೇರೆಡೆಗಳಿಂದ ಸಂಗ್ರಹಿಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

2023-24ರಲ್ಲಿ ಕರ್ನಾಟಕಕ್ಕೆ ವಾರ್ಷಿಕ 27.48 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಕೆಜಿಗೆ 34.6 ರೂ.ಗೆ ನೀಡಲು ಕೇಂದ್ರ ನಿರಾಕರಿಸಿತ್ತು. ರಾಜ್ಯ ಸರ್ಕಾರವು ಚುನಾವಣಾ ಪೂರ್ವ ಭರವಸೆಯಂತೆ 5 ಕೆಜಿ ಅಕ್ಕಿ ಬದಲಿಗೆ 170 ರೂಪಾಯಿ ನೀಡಲು ನಿರ್ಧರಿಸಿತ್ತು.

ಹೋಟೆಲ್, ಸಮುದಾಯ ಭವನಗಳಲ್ಲಿ ಆಹಾರ ಪೋಲು ಮಾಡುವುದನ್ನು ತಡೆಯಲು ಕಾನೂನು ರೂಪಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮುನಿಯಪ್ಪ ತಿಳಿಸಿದ್ದಾರೆ.


Political News

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

Scroll to Top