ನಟ ಕಿಚ್ಚ ಸುದೀಪ್ ಗೆ ಮಾತೃ ವಿಯೋಗ: ಸಿನಿ ಗಣ್ಯರಿಂದ ಅಂತಿಮ ದರ್ಶನ

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸುದೀಪ್ ತಾಯಿ ಸರೋಜಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಬೆಳಿಗ್ಗೆ 7:04ಕ್ಕೆ ನಿಧನರಾಗಿದ್ದಾರೆ ಎಂದು ಕುಟುಂಬದ ಆಪ್ತರು ತಿಳಿಸಿದ್ದಾರೆ. ಸರೋಜಾ ಅವರ ಪಾರ್ಥಿವ ಶರೀರವನ್ನು ಭಾನುವಾರ ಮಧ್ಯಾಹ್ನ 12 ಗಂಟೆಯ ವೇಳೆಗೆ ಕುಟುಂಬಸ್ಥರು ಬೆಂಗಳೂರಿನ  ಜೆಪಿ ನಗರದ ನಿವಾಸಕ್ಕೆ ತಂದಿದ್ದು, ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದೆ. ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ. ಸುದೀಪ್ ಅವರ … Read more

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೋದರ ಅರೆಸ್ಟ್: ಎಂಪಿ ಸೀಟು ಕೊಡಿಸ್ತೀನಿ ಅಂತ 2 ಕೋಟಿ ವಂಚನೆ!

ಲೋಕಸಭೆಗೆ ಟಿಕೆಟ್ ಕೊಡಿಸ್ತೀನಿ ಎಂದು 2 ಕೋಟಿ ರೂ. ಬೇಡಿಕೆ ಇಟ್ಟ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಸೋದರ ಗೋಪಾಲ್ ಜೋಶಿ ಅವರನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ದೇವಾನಂದ್ ಸಿಂಗ್ ಚೌಹಾಣ್ ಅವರ ಪತ್ನಿ ಸುನೀತಾ ಚೌಹಾಣ್ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರು ಆಧರಿಸಿ ಪೊಲೀಸರು ಬಂಧಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಗೋಪಾಲ್ ಜೋಷಿ ಅವರನ್ನು ಶನಿವಾರ ಹುಬ್ಬಳ್ಳಿಯಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೋಪಾಲ ಜೋಷಿ … Read more

ಬೆಂಗಳೂರು ಟೆಸ್ಟ್: ಸರ್ಫರಾಜ್ ಚೊಚ್ಚಲ ಶತಕ, ಕಿವೀಸ್ ಗೆ 107 ರನ್ ಗುರಿ

ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ ಸಿಡಿಸಿದ ಚೊಚ್ಚಲ ಶತಕದ ಹೊರತಾಗಿಯೂ ಭಾರತ ತಂಡ ನಾಟಕೀಯ ಕುಸಿತ ಅನುಭವಿಸಿದೆ. ಇದರಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಗೆ ಗೆಲ್ಲಲು 107 ರನ್ ಗಳ ಸುಲಭ ಸವಾಲೊಡ್ಡಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ 4ನೇ ದಿನವಾದ ಶನಿವಾರ 3 ವಿಕೆಟ್ ಗೆ 231 ರನ್ ಗಳಿಂದ ಎರಡನೇ ಇನಿಂಗ್ಸ್ ಮುಂದುವರಿಸಿದ ಭಾರತ ತಂಡ ದಿನದಾಟದ ಅಂತ್ಯಕ್ಕೂ ಮುನ್ನವೇ 462 ರನ್ ಗೆ ಆಲೌಟಾಗಿದೆ. … Read more

ಸಂಚಾರಿ ನಿಯಮ ಉಲ್ಲಂಘಿಸಿದ ಚಾಲಕನಿಗೆ 3 ಮೀ. ಉದ್ದದ ದಂಡ ವಿಧಿಸಿದ ಪೊಲೀಸರು!

ಸಾಮಾನ್ಯವಾಗಿ ಹೆಬ್ಬಾವು ಹಿಡಿದಾಗ ಹಿಡಿದವರು ತಲೆಯಿಂದ ಬಾಲದವರೆಗೂ ಎಲ್ಲರೂ ಹಿಡಿದುಕೊಂಡು ಫೋಟೊಗೆ ಫೋಜ್ ಕೊಡೋದು ಸಾಮಾನ್ಯ. ಆದರೆ ಇಲ್ಲಿ ಪೊಲೀಸರು ಹೆಬ್ಬಾವು ಹಿಡಿದಂತೆ ಸಂಚಾರಿ ನಿಯಮ ಉಲ್ಲಂಘಿಸಿದ ರಸೀದಿಯನ್ನು ಹಿಡಿದು ಫೋಜ್ ಕೊಟ್ಟಿದ್ದಾರೆ. ಹೌದು, ಪದೇಪದೆ ಸಂಚಾರ ನಿಯಮ ಉಲ್ಲಂಘಿಸಿದ ಕಾರು ಚಾಲಕನಿಗೆ ನೀಡಿದ ದಂಡದ ಬಿಲ್ ಉದ್ದ ನೋಡಿ ಆಶ್ಚರ್ಯಚಕಿತರಾದ ಪೊಲೀಸರು ಚಾಲಕನ ಜೊತೆ ಬಿಲ್ ಹಿಡಿದು ಫೋಟೊ ತೆಗೆಸಿಕೊಂಡಿದ್ದಾರೆ. ಶಿವಮೊಗ್ಗದ ಸಂಚಾರಿ ಪೊಲೀಸರು ಸುಮಾರು 3 ಮೀಟರ್ ಉದ್ದದ ಸಂಚಾರಿ ನಿಯಮದ ಬಿಲ್ ಕೊಟ್ಟು … Read more

ಬಿಗ್ ಬಾಸ್ ಸೆಟ್ ಗೆ ಮರಳಿದ ಸಲ್ಮಾನ್ ಖಾನ್: 60 ಸಿಬ್ಬಂದಿಯ ಬಿಗಿ ಭದ್ರತೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಬೆದರಿಕೆ ನಡುವೆಯೂ ಬಿಗ್ ಬಾಸ್ ರಿಯಾಲಿಟಿ ಶೋ ಸೆಟ್ ಬಿಗಿ ಭದ್ರತೆ ನಡುವೆ ಆಗಮಿಸಿ ನಿರೂಪಣೆ ಪುನರಾರಂಭಿಸಿದ್ದಾರೆ. 58 ವರ್ಷದ ಸಲ್ಮಾನ್ ಖಾನ್ ಬಿಗ್ ಬಾಸ್ ನ 18ನೇ ಆವೃತ್ತಿಯಲ್ಲಿ ವೀಕೆಂಡ್ ಕಾರ್ಯಕ್ರಮದ ನಿರೂಪಣೆಗಾಗಿ ಶುಕ್ರವಾರ ಸಂಜೆ 7 ಗಂಟೆಗೆ ಆಗಮಿಸಿದ್ದಾರೆ. ಸಂಜೆ 4 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಸುಮಾರು 3 ಗಂಟೆಗಳ ಕಾಲ ನಡೆಸಿಕೊಡಲಿದ್ದಾರೆ. ಸಲ್ಮಾನ್ ಖಾನ್ ಗೆ ಬಿಗ್ ಬಾಸ್ ಸೆಟ್ ನಲ್ಲಿಯೇ … Read more

ಭವಾನಿ ರೇವಣ್ಣಗೆ ಬಿಗ್ ರಿಲೀಫ್: ನಿರೀಕ್ಷಣಾ ಜಾಮೀನು ರದ್ದುಪಡಿಸಲು ಸುಪ್ರೀಂಕೋರ್ಟ್ ನಕಾರ

ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಚಿವೆ ಎಚ್.ಡಿ. ರೇವಣ್ಣ ಪತ್ನಿ ಹಾಗೂ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣ ಅವರಿಗೆ ಮಂಜೂರು ಮಾಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಲ್ಲಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ಎಸ್‌ ಐಟಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿಯ … Read more

ಸದ್ಗುರು ಜಗ್ಗಿ ವಾಸುದೇವ್ ಗೆ ರಿಲೀಫ್: ಈಶಾ ಫೌಂಡೇಷನ್ ವಿರುದ್ಧದ ಪ್ರಕರಣ ವಜಾ!

ಹೆಣ್ಣುಮಕ್ಕಳಿಗೆ ಬ್ರೈನ್ ವಾಷ್ ಮಾಡಿ ಆಶ್ರಮದಲ್ಲಿ ಇರಿಸಿಕೊಳ್ಳಲಾಗಿದೆ ಎಂದು ತಂದೆ ಈಶಾ ಫೌಂಡೇಷನ್ ವಿರುದ್ಧ ನೀಡಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರಿಂದ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ತಮಿಳುನಾಡಿನ ಕೊಯಮತ್ತೂರು ಆಶ್ರಮದಲ್ಲಿ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಪೋಷಕರ ಸಂಪರ್ಕದಿಂದ ಕಡಿತಗೊಳಿಸಿ ಆಶ್ರಮದಲ್ಲಿ ಅಕ್ರಮವಾಗಿ ಇರಿಸಿಕೊಳ್ಳಲಾಗಿದೆ ಎಂದು ಪ್ರೊಫೆಸರ್ ನ್ಯಾಯಾಲಯಕ್ಕೆ ದೂರು ನೀಡಿದ್ದರು. ದೂರಿನ ಅನ್ವಯ ಇತ್ತೀಚೆಗೆ ತಮಿಳುನಾಡು ಪೊಲೀಸರು ಈಶಾ ಫೌಂಡೇಷನ್ ಮೇಲೆ ದಾಳಿ ಮಾಡಿದ್ದರು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ … Read more

ನಟಿ ತಮನ್ನಾ ಭಾಟಿಯಾಗೆ ಸಂಕಷ್ಟ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಿಚಾರಣೆ

ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಗುರುವಾರ ವಿಚಾರಣೆಗೊಳಪಡಿಸಿದೆ. ಎಚ್ ಪಿಜೆಡ್ ಮೊಬೈಲ್ ಆಪ್ ಮೂಲಕ ಬಿಟ್ ಕಾಯಿನ್ ಅಥವಾ ಕ್ರಿಪ್ಟೊಕರೆನ್ಸಿ ಹೆಸರಿನಲ್ಲಿ ಹಲವಾರು ಜನರಿಗೆ ಸಂದೇಶ ಕಳುಹಿಸಿ ವಂಚಿಸಿದ ಪ್ರಕರಣದ ಹಿನ್ನೆಲೆಯಲ್ಲಿ ತಮನ್ನಾ ಭಾಟಿಯಾ ಅವರನ್ನು ಇಡಿ ವಿಚಾರಣೆ ನಡೆಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 34 ವರ್ಷದ ತಮನ್ನಾ ಭಾಟಿಯಾ ಅವರ ಹೇಳಿಕೆಯನ್ನು ಇಡಿ ದಾಖಲಿಸಿಕೊಂಡಿದೆ. ಮೊಬೈಲ್ ಆಪ್ ಸಂಸ್ಥೆಯ ಕಾರ್ಯಕ್ರಮದಲ್ಲಿ ತಮನ್ನಾ ಭಾಟಿಯಾ `ಸೆಲೆಬ್ರೆಟಿಯಾಗಿ … Read more

5 ಕೋಟಿ ರೂ.ಗೆ ಡಿಮ್ಯಾಂಡ್: ಸಲ್ಮಾನ್ ಖಾನ್ ಗೆ ಹೊಸ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಹೊಸದಾಗಿ ಮತ್ತೊಂದು ಬೆದರಿಕೆ ಕರೆ ಬಂದಿದ್ದು, 5 ಕೋಟಿ ರೂ. ಕೊಟ್ಟು ಲಾರೆನ್ಸ್ ಬಿಶ್ನೋಯಿ ಜೊತೆಗಿನ ವೈರತ್ವಕ್ಕೆ ಕೊನೆ ಮಾಡಿ ಎಂದು ಬೆದರಿಸಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ಗ್ರೂಪ್ ಗೆ ಬಂದಿರುವ ಸಂದೇಶದಲ್ಲಿ ಲಾರೆನ್ಸ್ ಬಿಶ್ನೋಯಿ ಗುಂಪಿನವರು ಎಂದು ಶಂಕಿಸಲಾದ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಸಲ್ಮಾನ್ ಖಾನ್ ಒಂದು ವೇಳೆ 5 ಕೋಟಿ ರೂ. ನೀಡದೇ ಇದ್ದರೆ ಇತ್ತೀಚೆಗೆ ಹತ್ಯೆಯಾದ ಶಾಸಕ ಬಾಬಾ ಸಿದ್ದಿಕಿಗೆ ಆದ ಸ್ಥಿತಿಗಿಂತ … Read more

ನಟಿ ಅಮೂಲ್ಯ ಸೋದರ, ನಿರ್ದೇಶಕ ದೀಪಕ್ ಅರಸ್ 42 ವಯಸ್ಸಿಗೆ ನಿಧನ

ನಟಿ ಅಮೂಲ್ಯ ಸೋದರ ಹಾಗೂ ಕನ್ನಡ ಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದ ಕಾರಣ ಗುರುವಾರ ನಿಧನರಾಗಿದ್ದು, ಅವರಿಗೆ 42 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ದೀಪಕ್ ಅರಸ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ದೀಪಕ್ ಅರಸ್ ಮನಸಾಲಜಿ, ಶುಗರ್ ಫ್ಯಾಕ್ಟರಿ ಎಂಬ ಎರಡು ಸಿನಿಮಾಗಳನ್ನು ನಿರ್ದೇಶಿಸಿದ್ದರು. ಅಲ್ಲದೇ ಟೂರ್ ಅಂಡ್ ಟ್ರಾವೆಲ್ಸ್ ನಡೆಸುತ್ತಿದ್ದರು.