advertise here

Search

ಪತಿ ಸಾವಿನ ಸುದ್ದಿ ಕೇಳಿ ಪತ್ನಿ ಆತ್ಮಹತ್ಯೆ: ಆಘಾತ ಮೂಡಿಸಿದ ಸೇನಾಧಿಕಾರಿಗಳ ಸಾವು!

ಪತಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಪತ್ನಿ ಕೂಡ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ದೆಹಲಿ ಸಮೀಪದ ಆಗ್ರಾದಲ್ಲಿ ನಡೆದಿದೆ. ಭಾರತೀಯ ವಾಯುಪಡೆಯ ಫ್ಲೈಟ್ ಲೆಫ್ಟಿನೆಂಟ್ ದೀನ್ ದಯಾಳ್ ದೀಪ್ ಸಾವಿನ ಸುದ್ದಿ ಕೇಳಿದ ಭಾರತೀಯ ಸೇನೆಯ ಕ್ಯಾಪ್ಟನ್ ಆಗಿದ್ದ ಪತ್ನಿ ರೇಣು ತನ್ವಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯ ಆರ್ಮಿ ಕಂಟೊನ್ಮೆಂಟ್ ಆಫೀಸರ್ಸ್ ಕಾಲೋನಿಯಲ್ಲಿ ವಾಸವಿದ್ದ ರೇಣು ತನ್ವಾರ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪತಿಯ … Read more

ಬೆಂಗಳೂರು ಟೆಸ್ಟ್: 46 ರನ್ ಗೆ ಆಲೌಟಾದ ಭಾರತ ತವರಿನಲ್ಲಿ ಕಳಪೆ ದಾಖಲೆ!

ನ್ಯೂಜಿಲೆಂಡ್ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ ಭಾರತದ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪೆರೇಡ್ ನಡೆಸಿದ್ದಾರೆ. ಇದರಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ ಭಾರತ ತಂಡ 46 ರನ್ ಗೆ ಆಲೌಟಾಗಿದೆ. ತವರಿನಲ್ಲಿ ಭಾರತ ತಂಡ ದಾಖಲಿಸಿದ ಅತ್ಯಂತ ಕಳಪೆ ಮೊತ್ತವಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಳೆಯಿಂದ ಮೊದಲ ದಿನದಾಟ ರದ್ದಾಗಿದ್ದರಿಂದ ಪಂದ್ಯದ ಎರಡನೇ ದಿನವಾದ ಗುರುವಾರ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 31.2 ಓವರ್ … Read more

ಮಳೆ ನಿರ್ವಹಣೆ ಹೆಸರಲ್ಲಿ ಬಿಬಿಎಂಪಿಯಿಂದ ಕೋಟ್ಯಂತರ ರೂ. ದುರ್ಬಳಕೆ?

ಬೆಂಗಳೂರಿನಲ್ಲಿ ಮಳೆಯಾದರೆ ಜನರು ಪರದಾಡುತ್ತಿದ್ದರೆ, ಬಿಬಿಎಂಪಿ ಅಧಿಕಾರಿಗಳು ಖುಷಿಯಿಂದ ತೇಲಾಡುತ್ತಿರುತ್ತಾರೆ. ಇದಕ್ಕೆ ಕಾರಣ ಸರಕಾರದಿಂದ ಬರುವ ಹಣ ಹೊಡೆಯಬಹುದಲ್ವಾ ಅಂತ! ಹೌದು, ಬೆಂಗಳೂರಿನಲ್ಲಿ ಸಣ್ಣ ಮಳೆಯಾದರೂ ಸಮಸ್ಯೆಗಳು ಕಂಡು ಬರುತ್ತವೆ. ಚರಂಡಿಗಳು ತುಂಬಿ ಹರಿದು ರಸ್ತೆಯೆಲ್ಲಾ ಜಲಾವೃತಗೊಳ್ಳುತ್ತವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗುತ್ತದೆ. ಆದರೆ ಅಧಿಕಾರಿಗಳು ಹಾಗೂ ಬಿಬಿಎಂಪಿ ಸಿಬ್ಬಂದಿ ಏನೋ ಕೆಲಸ ಮಾಡುತ್ತಿರುವಂತೆ ಗಡಿಬಿಡಿಯಲ್ಲಿ ಓಡಾಡುತ್ತಿರುತ್ತಾರೆ. ಆದರೆ ಯಾವ ಕೆಲಸವೂ ಮಾಡುವುದಿಲ್ಲ. ಅದರಲ್ಲೂ ಶಾಶ್ವತ ಪರಿಹಾರವಂತೂ ಕಾಣುವುದಿಲ್ಲ. ಇದರಿಂದ ಬೆಂಗಳೂರಿನ ಸಮಸ್ಯೆ ಬಗೆಹರಿಯುವುದೇ … Read more

ಮಹತ್ವಾಕಾಂಕ್ಷಿ `ಕಾವೇರಿ 5ನೇ ಹಂತದ ಯೋಜನೆ’ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ನಾನೇ ಶಂಕುಸ್ಥಾಪನೆ ಮಾಡಿ ನನ್ನಿಂದಲೇ ಉದ್ಘಾಟನೆಯಾಗಿದೆ. ನುಡಿದಂತೆ ನಡೆದದ್ದಕ್ಕೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. BBMP ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಮತ್ತು ಹಿಂದಿನ ಸರ್ಕಾರಗಳು ಅಗತ್ಯ ಹಣ ಬಿಡುಗಡೆ ಮಾಡದೆ ನಿರಾಸಕ್ತಿ ವಹಿದಿದ್ದರಿಂದ ಯೋಜನೆ ನಿಧಾನವಾಯಿತು. ಮತ್ತೆ ನಾವು ಅಧಿಕಾರಕ್ಕೆ ಬಂದು … Read more

ಕಾವೇರಿ-5 ನೇ ಹಂತದ ಯೋಜನೆ ಮಾಡಿದ್ದು ಬಿಜೆಪಿ, ಹೆಸರು ತೆಗೆದುಕೊಳ್ಳುತ್ತಿರುವುದು ಕಾಂಗ್ರೆಸ್‌: ಆರ್‌.ಅಶೋಕ

ಪೂಜೆ ಮುಗಿದ ನಂತರ ಕೊನೆಯಲ್ಲಿ ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ-5ನೇ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್‌ ಮುಂದೆ ಬಂದು ಹೆಸರು ಪಡೆದುಕೊಳ್ಳುತ್ತಿದೆ. ಈ ಯೋಜನೆ ಮಾಡಿದ್ದು ಬಿಜೆಪಿ ಎಂದು ಗೊತ್ತಿದ್ದರೂ, ನಾವೇ ಮಾಡಿದ್ದೆಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕಾವೇರಿ 5 ನೇ ಹಂತದ ಯೋಜನೆಯನ್ನು ತಾವೇ ಮಾಡಿದ್ದು ಎಂದು ಜಂಭ ಕೊಚ್ಚಿಕೊಂಡಿದ್ದಾರೆ. 2018 ರ ಜನವರಿ 24 ರಂದು ಈ … Read more

ಏರ್ ಇಂಡಿಯಾಗೆ ಹುಸಿಬಾಂಬ್ ಕರೆ: 3 ದಿನದಲ್ಲಿ 12 ವಿಮಾನ ಮಾರ್ಗ ಬದಲು

ಹುಸಿ ಬಾಂಬ್ ಬೆದರಿಕೆಗಳಿಂದ ಏರ್ ಇಂಡಿಯಾ ವಿಮಾನ ಸಂಸ್ಥೆ ತತ್ತರಿಸಿದ್ದು, ಕಳೆದ ಮೂರು ದಿನದಲ್ಲಿ 12 ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮಂಗಳವಾರ ಒಂದೇ ದಿನದಲ್ಲಿ ಹುಸಿಬಾಂಬ್ ಬೆದರಿಕೆಯಿಂದ 7 ವಿಮಾನಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಅಲ್ಲದೇ ಕಳೆದ 48 ಗಂಟೆಗಳಲ್ಲಿ ಈ ರೀತಿ ಬಾಂಬ್ ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ 10 ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬುಧವಾರ ಮತ್ತೆ ಹುಸಿ ಬಾಂಬ್ ಬೆದರಿಕೆಯಿಂದ ಮೂರು ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಮುಂಬೈನಿಂದ ಚಿಕಾಗೊಗೆ ಹೊರಟ್ಟಿದ್ದ … Read more

ಮಸೀದಿಯಲ್ಲಿ ಜೈ ಶ್ರೀರಾಮ್ ಎಂದು ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆ ಆಗಲ್ಲ: ಕರ್ನಾಟಕ ಹೈಕೋರ್ಟ್

ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಕೂಗಿದರೆ ಯಾವುದೇ ಹಂತದಲ್ಲೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಕಡಬ ತಾಲೂಕಿನಲ್ಲಿ ಮಸೀದಿಗೆ ನುಗ್ಗಿದ ಇಬ್ಬರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು. ಇವರ ವರ್ತನೆಯಿಂದ ಸಾರ್ವಜನಿಕ ಜೀವನಕ್ಕೆ ಯಾವುದೇ ಅಡ್ಡಿಯಾಗುವುದಿಲ್ಲ. ಅಲ್ಲದೇ ಧಾರ್ಮಿಕ ನಂಬಿಕೆಗಳಿಗೆ ಅಡ್ಡಿಯಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಹೈಕೋರ್ಟ್, ಇಬ್ಬರ ವಿರುದ್ಧ ಕ್ರಿಮಿನಲ್ ಪ್ರಕರಣದಡಿ ಕ್ರಮ ಕೈಗೊಳ್ಳುವ ಕುರಿತ ಅರ್ಜಿಯನ್ನು ವಜಾಗೊಳಿಸಿತು. ಬೈಕ್‌ನಲ್ಲಿ ಬಂದ … Read more

ಮುಂಬೈನ 14 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ: ಮೂವರು ದುರ್ಮರಣ

14 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟ ದಾರುಣ ಘಟನೆ ವಾಣಿಜ್ಯ ನಗರಿ ಮುಂಬೈನಲ್ಲಿ ಸಂಭವಿಸಿದೆ. ಅಂಧೇರಿಯ ಲೋಕಂಡ್ವಾಲಾ ಕಾಂಪ್ಲೆಕ್ಸ್ ನ ವಸತಿ ಸಂಕೀರ್ಣದ 10ನೇ ಮಹಡಿಯಲ್ಲಿ ಬುಧವಾರ ಬೆಳಿಗ್ಗೆ 8 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ. ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (72) ಮತ್ತು ಪೆಲುಬೆಟಾ (42) ಮೃತಪಟ್ಟ ದುರ್ದೈವಿಗಳು. ದುರ್ಘಟನೆಯಲ್ಲಿ ಗಾಯಗೊಂಡಿದ್ದ ಮೂವರರನ್ನು ಸಮೀಪದ ಕೂಪರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಆಸ್ಪತ್ರೆಗೆ ಬರುವ ಮುನ್ನವೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಜಮ್ಮು ಕಾಶ್ಮೀರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಓಮರ್ ಅಬ್ದುಲ್ಲಾ!

ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಓಮರ್ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. 370ನೇ ವಿಧಿ ರದ್ದುಪಡಿಸಿ 10 ವರ್ಷದ ನಂತರ ಜಮ್ಮು ಕಾಶ್ಮೀರದಲ್ಲಿ ಹೊಸ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಂತಾಯಿತು. ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರದ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲಾ 8 ಶಾಸಕರ ಜೊತೆ ಪ್ರಮಾಣ ವಚನ ಸ್ವೀಕರಿಸಿದರು. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಪ್ರಮಾಣ ವಚನ ಬೋಧಿಸಿದರು. ಮೈತ್ರಿ ಪಕ್ಷವಾದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ … Read more

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!

ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆಯಾಗಬಾರದೆಂದು  ಕೋರುತ್ತಾ, ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ಬಗ್ಗೆಯೂ ಸಭೆಯ ಗಮನವನ್ನು … Read more