advertise here

Search

ನ.13ರಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ. 20ರಂದು ಫಲಿತಾಂಶ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನವೆಂಬರ್ 13ರಂದು ನಡೆಯಲಿದ್ದು, 20ರಂದು ಫಲಿತಾಂಶ ಹೊರಬೀಳಲಿದೆ. ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜಯ ಸಾಧಿಸಿದ್ದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಕೇಂದ್ರ ಸಚಿವರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಸಂಡೂರು ಕ್ಷೇತ್ರದಲ್ಲಿ ಈ.ತುಕರಾಮ್ ಲೋಕಸಭೆಯಲ್ಲಿ ಜಯ … Read more

ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್: ನ.20 ಮತದಾನ, 23ರಂದು ಫಲಿತಾಂಶ

ಭಾರೀ ಕುತೂಹಲ ಮೂಡಿಸಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇಂದ್ರ ಚುನಾವಣಾ ಆಯೋಗ ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎರಡು ರಾಜ್ಯಗಳ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು, ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಹಾಗೂ ಜಾರ್ಖಂಡ್ ನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ಘೋಷಣೆ ಮಾಡಿದೆ. ಮಹಾರಾಷ್ಟ್ರ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್ ನ 82 ಸ್ಥಾನಗಳಿಗೆ ಎರಡು … Read more

ಬಿಜೆಪಿ ಆಡಳಿತದಲ್ಲಿ 619 ಕೋಮುಗಲಭೆಯ ಕೇಸ್ ವಾಪಸ್: ಕಾಂಗ್ರೆಸ್ ಆರೋಪ

ರಾಜ್ಯದಲ್ಲಿ ಪಿಎಫ್ಐ, ಎಸ್ ಡಿಪಿಐ, ಭಜರಂಗದಳ, ಶ್ರೀರಾಮಸೇನೆ ಮತ್ತು ಇತರೆ ಸಂಘಟನೆಗಳ ಕಾರ್ಯಕರ್ತರ ಮೇಲೆ 949 ಕೋಮುಗಲಭೆ ಸಂಬಂಧಿ ಪ್ರಕರಣಗಳು ದಾಖಲಾಗಿದ್ದು, ಒಟ್ಟಾರೆ 619 ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಿಪ್ಪ ಆಡಳಿತದಲ್ಲಿ ಅತೀ ಹೆಚ್ಚು 385 ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಸರ್ಕಾರ ನೀಡಿದ ಲಿಖಿತ ಉತ್ತರ … Read more

ವನಿತೆಯರ ಟಿ-20 ವಿಶ್ವಕಪ್: 8 ಕ್ಯಾಚ್ ಬಿಟ್ಟು ಸೋತ ಪಾಕಿಸ್ತಾನ, ಹೊರಬಿದ್ದ ಭಾರತ!

ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ತಂಡ ಹೀನಾಯವಾಗಿ ಸೋತಿದ್ದರಿಂದ ಭಾರತ ತಂಡ ವನಿತೆಯರ ಟಿ-20 ವಿಶ್ವಕಪ್ ಸೆಮಿಫೈನಲ್ ರೇಸ್ ನಿಂದ ಹೊರಬಿದ್ದಿದೆ. ಈ ಮೂಲಕ 8 ಆವೃತ್ತಿಗಳ ಪೈಕಿ ಇದೇ ಮೊದಲ ಬಾರಿ ಭಾರತ ವನಿತೆಯರು ಗುಂಪು ಹಂತದಲ್ಲೇ ನಿರ್ಗಮಿಸಿ ಮುಖಭಂಗಕ್ಕೆ ಒಳಗಾಗಿದೆ. ಭಾರತ ತಂಡ ಭಾನುವಾರದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ರನ್ ಗಳಿಂದ ಸೋಲುಂಡಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ವಿರುದ್ಧ ನ್ಯೂಜಿಲೆಂಡ್ ಸೋತಿದ್ದರಿಂದ ಭಾರತಕ್ಕೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಲಭಿಸುವ ಸಾಧ್ಯತೆ ಇತ್ತು. ಆದರೆ ನ್ಯೂಜಿಲೆಂಡ್ … Read more

ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಭಾರತ ಸರ್ಕಾರದ ಏಜೆಂಟ್ ಸಂಪರ್ಕ: ಕೆನಡಾ ಗಂಭೀರ ಆರೋಪ

ಭಾರತ ಸರ್ಕಾರದ ಏಜೆಂಟ್ ಗಳು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಕೆನಡಾ ಗಂಭೀರ ಆರೋಪ ಮಾಡಿದೆ. ಈ ಮೂಲಕ ಪರಸ್ಪರ ರಾಯಭಾರ ಅಧಿಕಾರಿಗಳನ್ನು ಹೊರಹಾಕಿದ ಬೆನ್ನಲ್ಲೇ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಮತ್ತಷ್ಟು ಉಲ್ಭಣವಾಗಿದೆ. ಖಾಲಿಸ್ತಾನಿ ಮುಖಂಡ ಹಾಗೂ ಕೆನಡಾ ನಿವಾಸಿ ಹರ್ದೀಪ್ ನಿಜ್ಜಾರ್ ಹತ್ಯೆ ಹಿಂದೆ ಭಾರತ ಸರ್ಕಾರದ ಕೈವಾಡವಿದೆ ಎಂದು ಈ ಹಿಂದೆ ಆರೋಪಿಸಿದ್ದ ಕೆನಡಾ ಸರ್ಕಾರ ಇದೀಗ ವಿಷಯವನ್ನು ಮರುಪ್ರಸ್ತಾಪಿಸಿದ್ದು, ಪ್ರತ್ಯೇಕ ರಾಷ್ಟ್ರಕ್ಕಾಗಿ ಹೋರಾಟ ನಡೆಸುತ್ತಿರುವ … Read more

ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ … Read more

ನ್ಯೂಯಾರ್ಕ್ ಗೆ ಹೊರಟ್ಟಿದ್ದ 239 ಪ್ರಯಾಣಿಕರಿದ್ದ ವಿಮಾನ ದೆಹಲಿಗೆ ಮಾರ್ಗ ಬದಲಾವಣೆ!

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನಿಂದ ಅಮೆರಿಕದ ನ್ಯೂಯಾರ್ಕ್ ಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಎಐ 119 ವಿಮಾನ 239 ಪ್ರಯಾಣಿಕರನ್ನು ಹೊತ್ತು ಮುಂಬೈನಿಂದ ಹೊರಟ್ಟಿದ್ದು, ವಿಮಾನ ಹೊರಟ ಕೆಲವೇ ಕ್ಷಣಗಳಲ್ಲಿ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಕೂಡಲೇ ದೆಹಲಿಗೆ ಮಾರ್ಗ ಬದಲಾಯಿಸಲಾಯಿತು. ವಿಮಾನದಲ್ಲಿದ್ದ ಪ್ರತಿಯೊಬ್ಬ ಪ್ರಯಾಣಿಕ ಹಾಗೂ ಸಿಬ್ಬಂದಿಯ ಭದ್ರತಾ ಪರಿಶೀಲನೆ ನಡೆಸಲಾಗಿದ್ದು, ಯಾವುದೇ ಆತಂಕ ಕಂಡು ಬಾರದ ಕಾರಣ ವಿಮಾನ ಮತ್ತೆ ನ್ಯೂಯಾರ್ಕ್ ಕಡೆ … Read more

ಕಾಮನಬಿಲ್ಲು ಖ್ಯಾತಿಯ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಸೋದರರಾಗಿದ್ದು, ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಸಹೋದರ. ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ ಕಣ್ಣು, ಶೃತಿ ಸೇರಿದಾಗ, ಶಿವರಾಜಕುಮಾರ್ ಅಭಿನಯದ ಮೃತ್ಯುಂಜಯ, ಆನಂದ ಜ್ಯೋತಿ ಹಾಗೂ ಮಂಜುಳ ಅವರು ನಟಿಸಿದ್ದ “ರುದ್ರಿ” ಮುಂತಾದ ಚಿತ್ರಗಳನ್ನು ಚಿ.ದತ್ತರಾಜ್ ನಿರ್ದೇಶಿಸಿದ್ದರು‌. ಸೋಮವಾರ ಮಧ್ಯಾಹ್ನ 1.30ಕ್ಕೆ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯಕ್ರಿಯೆ ನಡೆಯಿತು.

ಬಿಗ್ ಬಾಸ್ ಕನ್ನಡ ನಿರೂಪಣೆಗೆ ವಿದಾಯ ಘೋಷಿಸಿದ ಕಿಚ್ಚ ಸುದೀಪ್!

ಕನ್ನಡದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ಕನ್ನಡ ಆವೃತ್ತಿ ನಿರೂಪಣೆಯಿಂದ ನಟ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ. ಭಾನುವಾರ ಟ್ವೀಟ್ ಮಾಡಿರುವ ಅವರು ಬಿಗ್ ಬಾಸ್ 11ರ ಆವೃತ್ತಿ ನನ್ನ ಕೊನೆಯದಾಗಿದ್ದು, ಜನರ ಪ್ರೀತಿಗೆ ಪಾತ್ರವಾಗಿರುವ ಬಿಗ್ ಬಾಸ್ ಅನ್ನು ಈ ಬಾರಿ ಅತ್ಯುತ್ತಮವಾಗಿ ಮುಗಿಸೋಣ ಎಂದು ಹೇಳಿದ್ದಾರೆ. ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಆದಾಗಿನಿಂದ ನಿರೂಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸುದೀಪ್, ಇದು ನನ್ನ ಕೊನೆಯ ಬಿಗ್ ಬಾಸ್ ಸೀಸನ್ ಆಗಿದೆ. … Read more

ದಾವೂದ್ ದಾರಿಯಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ!

ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣದ ಹೊಣೆ ಹೊತ್ತಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾದಿಯಲ್ಲಿ ಸಾಗುತ್ತಿದ್ದು, 11 ರಾಜ್ಯಗಳಲ್ಲಿ 700 ಶೂಟರ್ ಗಳನ್ನು ಹೊಂದಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್ ಐಎ) 16 ಗ್ಯಾಂಗ್ ಸ್ಟರ್ ಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಿಕೊಂಡಿದೆ. ಪಂಜಾಬ್ ನಲ್ಲಿ ಖ್ಯಾತ ಗಾಯಕನ ಹತ್ಯೆ ಪ್ರಕರಣದ ಪ್ರಮುಖ … Read more