ಬೆಂಗಳೂರಿನಲ್ಲಿ ಜಿಗಣಿಯೊಂದರಲ್ಲೇ 5 ಸೇರಿದಂತೆ ಝೀಕಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಡೆಂಘೀ ಬೆನ್ನಲ್ಲೇ ಮತ್ತೊಂದು ಸೋಂಕಿ ಅಬ್ಬರದಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಬೆಂಗಳೂರಿನ ಜಿಗಣಿ ಪ್ರದೇಶವೊಂದರಲ್ಲೇ 5 ಮಂದಿಗೆ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.
ಐವರು ಸೋಂಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಝೀಕಾ ವೈರಸ್ ಸೋಂಕಿತರ ಕುಟುಂಬಸ್ತರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗೆ ಲ್ಯಾಬ್ ಗೆ ಕಳುಹಿಸಲಾಗಿದೆ.
ರಾಜ್ಯದಲ್ಲಿ 7 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸಿದೆ.
ಝೀಕಾ ವೈರಸ್ ಪತ್ತೆಯಾದ ಮನೆಯ ಸುತ್ತಮುತ್ತಲಿನ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುತ್ತಿದೆ. ಆ ಪ್ರದೇಶದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಕಂಟೈನ್ವೆಂಟ್ ಜೋನ್ ಎಂದು ಪರಿಗಣಿಸುತ್ತದೆ.
ಝೀಕಾ ವೈರಸ್ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಝೀಕಾ ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಎರಡು ವಾರದಲ್ಲಿ 5 ಪ್ರಕರಣಗಳು ಪತ್ತೆಯಾಗಿವೆ. ಜನರು ಆತಂಕಪಡುವ ಅಗತ್ಯವಿಲ್ಲ. ಆದರೆ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.