ಧಾರ್ಮಿಕ ಕಾರ್ಮಿಕ ಕಾರ್ಯಕ್ರಮದ ವೇಳೆ ದೇವಸ್ಥಾನ ಗೋಡೆ ಕುಸಿತು 8 ಮಕ್ಕಳು ಮೃತಪಟ್ಟ ದಾರುಣ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ.
ಶಾಪೂರ್ ಜಿಲ್ಲೆಯಲ್ಲಿ ಭಾನುವಾರ ಹರ್ದುಲ್ ಬಾಬಾ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ದುರ್ಘಟನೆ ಸಂಭವಿಸಿದೆ.
ದುರ್ಘಟನೆಯಲ್ಲಿ 8 ಮಕ್ಕಳು ಮೃಪಟ್ಟಿದ್ದು, ಹಲವಾರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನೆ ಮಾಹಿತಿ ಬರುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯ ನಡೆಸಿದ್ದಾರೆ. ಮೃತಪಟ್ಟ ಮಕ್ಕಳೆಲ್ಲಾ 5ರಿಂದ 7 ವರ್ಷ ವಯಸ್ಸಿನವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚೆಗಷ್ಟೇ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ಶಾಲೆಯಿಂದ ಮನೆಗೆ ಮರಳುತ್ತಿದ್ದ ಮಕ್ಕಳ ಮೇಲೆ ಗೋಡೆ ಕುಸಿದ ಪರಿಣಾಮ 4 ಮಕ್ಕಳು ಮೃತಪಟ್ಟಿದ್ದರು. ಘಟನೆಯಲ್ಲಿ ಮನೆಯ ಮಾಲೀಕನನ್ನು ಬಂಧಿಸಲಾಗಿತ್ತು.