advertise here

Search

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ 830 ವಾಣಿಜ್ಯ ಕಟ್ಟಡಗಳು ಸೀಜ್..


ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್
ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 830 ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತರಾದ  ಮುನೀಶ್ ಮೌದ್ಗಿಲ್ ರವರು ತಿಳಿಸಿದ್ದಾರೆ.

ಪಾಲಿಕೆಯ 8 ವಲಯಗಳಲ್ಲಿ ಅತಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರಿಂದ ತ್ವರಿತಗತಿಯಲ್ಲಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು. ಈ ಪೈಕಿ ಆಯಾ ವಲಯಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ತ್ವರಿತಗತಿಯಲ್ಲಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಲು ಕ್ರಮವಹಿಸಲಾಗುತ್ತಿದೆ ಎಂದರು.

ಅದರಂತೆ, ಎಲ್ಲಾ ಪರಿಷ್ಕರಣೆ ಪ್ರಕರಣಗಳಲ್ಲಿ, ಆಸ್ತಿಗಳಿಗೆ ಬೀಗಮುದ್ರೆ, ಮುಟ್ಟುಗೋಲು ಮತ್ತು ಜಪ್ತಿ ಮಾರಾಟವನ್ನು ಬಳಸಿಕೊಂಡು ವಸೂಲಾತಿ ಮಾಡಬೇಕಿದೆ. ಈ ಸಂಬಂಧ 1ನೇ ಜನವರಿ 2025 ರಿಂದ 9ನೇ ಜನವರಿ 2025 ರವರೆಗೆ ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಂತಹ 830 ವಸತಿಯೇತರ ಕಟ್ಟಡಗಳಿಗೆ ಬೀಗಮುದ್ರೆ ಹಾಕಲಾಗಿದೆ. ಕಳೆದ 24 ಗಂಟೆಗಳಲ್ಲಿ ಎಲ್ಲಾ 08 ವಲಯಗಳು ಸೇರಿದಂತೆ 182 ವಸತಿಯೇತರ ಕಟ್ಟಡಗಳಿಗೆ ಬೀಗಮುದ್ರೆ ಹಾಕಲಾಗಿದೆ. ಆಯಾ ವಲಯ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ವಿಚಾರವಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ವಲಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ALSO READ :  ದಸರಾಗೂ ದರ್ಶನ್ ಬಿಡುಗಡೆ ಭಾಗ್ಯವಿಲ್ಲ: ಅಕ್ಟೋಬರ್ 14ಕ್ಕೆ ಜಾಮೀನು ತೀರ್ಪು

Scroll to Top