ಹೊಸ ನಾಯಕನ ಆಯ್ಕೆಯ ಬೆನ್ನಲ್ಲೇ ತೀವ್ರಗೊಂಡ ಯುದ್ಧ: ಆಪರೇಶನ್ ಎಪಿಕ್ ಫ್ಯೂರಿಗೆ 10ನೇ ದಿನ


ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಮೆರಿಕ ಮತ್ತು ಇಸ್ರೇಲ್ ನೇತೃತ್ವದ ‘ಆಪರೇಶನ್ ಎಪಿಕ್ ಫ್ಯೂರಿ’ ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ, ದೇಶದ ಆಡಳಿತದಲ್ಲಿ ಭಾರಿ ಬದಲಾವಣೆ ಉಂಟಾಗಿದೆ. ಇರಾನ್‌ನ ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್, ಅಲಿ ಖಮೇನಿ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ದೇಶದ ಹೊಸ ಪರಮೋಚ್ಚ ನಾಯಕರನ್ನಾಗಿ ಘೋಷಿಸಿದೆ ಎಂದು ಮಾಧ್ಯಮಗಳ ವರದಿ ಮಾಡಿವೆ.

ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಮೊದಲ ಹಂತದ ವೈಮಾನಿಕ ದಾಳಿಯಲ್ಲಿ ಅಲಿ ಖಮೇನಿ ಅವರು ಟೆಹ್ರಾನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಹತ್ಯೆಯಾಗಿದ್ದರು. ಈ ದಾಳಿಯು ಇರಾನ್‌ನ ಇತಿಹಾಸದಲ್ಲಿ ದೊಡ್ಡ ರಾಜಕೀಯ ಮತ್ತು ಭದ್ರತಾ ಬಿಕ್ಕಟ್ಟನ್ನು ಸೃಷ್ಟಿಸಿದೆ. ಹೊಸ ನಾಯಕನಾಗಿ ಆಯ್ಕೆಯಾಗಿರುವ ಮೊಜ್ತಬಾ ಖಮೇನಿ ಅವರ ಮೇಲೆ ಇಸ್ರೇಲ್ ನೇರ ಎಚ್ಚರಿಕೆ ನೀಡಿದ್ದು, ಯಾವುದೇ ಹೊಸ ಉತ್ತರಾಧಿಕಾರಿ ಬಂದರೂ ನಾವು ಅವರನ್ನು ಬಿಡುವುದಿಲ್ಲ ಮತ್ತು ನಮ್ಮ ದಾಳಿಗಳು ಮುಂದುವರಿಯುತ್ತವೆ ಎಂದು ಖಡಕ್ ಸಂದೇಶ ರವಾನಿಸಿದೆ.

ALSO READ :  ಬೆಂಗಳೂರಲ್ಲಿ ಸಿಲಿಂಡರ್ ಗೋಳಾಟ: 20 ದಿನದ ಹಿಂದೆ ಬುಕ್ ಮಾಡಿದ್ರೂ ಬರ್ತಿಲ್ಲ ಗ್ಯಾಸ್!

ಈ ಯುದ್ಧ ಕೇವಲ ಇರಾನ್ ಮತ್ತು ಇಸ್ರೇಲ್‌ಗೆ ಸೀಮಿತವಾಗಿಲ್ಲ

ಮತ್ತೊಂದೆಡೆ, ಯುದ್ಧವು ಕೇವಲ ಇರಾನ್ ಮತ್ತು ಇಸ್ರೇಲ್ ನಡುವೆ ಸೀಮಿತವಾಗಿಲ್ಲ. ಇರಾನ್‌ನ ಪ್ರತೀಕಾರದ ಭಾಗವಾಗಿ ಅಬುಧಾಬಿ ಸೇರಿದಂತೆ ಯುಎಇಯ ವಿವಿಧ ಭಾಗಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳು ನಿರಂತರವಾಗಿ ನಡೆಯುತ್ತಿವೆ. ಕಳೆದ ದಿನವೂ ಅಬುಧಾಬಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದ್ದು, ಅಲ್ಲಿನ ರಕ್ಷಣಾ ಪಡೆಗಳು ಕ್ಷಿಪಣಿಗಳನ್ನು ಆಕಾಶದಲ್ಲೇ ತಡೆಹಿಡಿದಿವೆ. ಈ ಘಟನೆಗಳು ಮಧ್ಯಪ್ರಾಚ್ಯದಲ್ಲಿ ಅಶಾಂತಿಯನ್ನು ಮತ್ತಷ್ಟು ಹೆಚ್ಚಿಸಿದ್ದು, ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿವೆ.

ಇದನ್ನೂ ಓದಿ | ಇಂಧನ ಬೆಲೆ ಏರಿಕೆ ಶಾಕ್: ಗೃಹ ಬಳಕೆಯ ಸಿಲಿಂಡರ್ ಬೆಲೆ ಇನ್ಮುಂದೆ ₹913

ಯುದ್ಧದ ಈ ಹತ್ತನೇ ದಿನದಲ್ಲಿ ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿದೆ. ಅಮೆರಿಕ ಮತ್ತು ಇಸ್ರೇಲ್ ತಮ್ಮ ಸೇನಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದರೆ, ಇರಾನ್ ತನ್ನ ಅಸ್ತಿತ್ವ ಮತ್ತು ಸಾರ್ವಭೌಮತೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದೆ. ಮುಂಬರುವ ದಿನಗಳಲ್ಲಿ ಈ ಸಂಘರ್ಷ ಯಾವ ಹಂತಕ್ಕೆ ತಲುಪಲಿದೆ ಎಂಬುದು ಇಡೀ ವಿಶ್ವದ ಕುತೂಹಲಕ್ಕೆ ಕಾರಣವಾಗಿದೆ.


Leave a Comment