advertise here

Search

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

Bagalkot

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬಾಗಲಕೋಟೆ ಉಪಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಗೆಲುವಿಗಾಗಿ ಆಡಳಿತರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ಭರ್ಜರಿ ತಂತ್ರಗಳನ್ನು ಹೆಣೆಯುತ್ತಿವೆ. ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ, ಈ ರಾಜಕೀಯ ಭರಾಟೆಯ ನಡುವೆ ಬಾಗಲಕೋಟೆ ಜಿಲ್ಲೆಯ ಪ್ರಮುಖ, ದಶಕಗಳಷ್ಟು ಹಳೆಯದಾದ ಜ್ವಲಂತ ಸಮಸ್ಯೆಗಳ ದೊಡ್ಡ ಪಟ್ಟಿಯೊಂದು ಮುನ್ನೆಲೆಗೆ ಬಂದಿದ್ದು, ರಾಜಕೀಯ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಚುನಾವಣೆ ಬಂದಾಗಲೆಲ್ಲಾ ರಾಜಕಾರಣಿಗಳು ಭರವಸೆಗಳ ಮಹಾಪೂರವನ್ನೇ ಹರಿಸುತ್ತಾರೆ. ಆದರೆ, ಬಾಗಲಕೋಟೆ ಜಿಲ್ಲೆಯ ಜನತೆ ಈ ಬಾರಿ ಕೇವಲ ಆಶ್ವಾಸನೆಗಳಿಗೆ ಮರುಳಾಗುವ ಸ್ಥಿತಿಯಲ್ಲಿ ಇಲ್ಲ. ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಕನಸುಗಳು ಇನ್ನೂ ನನಸಾಗಿಲ್ಲ ಎಂಬ ಆಕ್ರೋಶ ಸಾರ್ವಜನಿಕರಲ್ಲಿದೆ. ಮುಖ್ಯವಾಗಿ ಏಳು ಪ್ರಮುಖ ಸಮಸ್ಯೆಗಳು ಈ ಉಪಚುನಾವಣೆಯ ದಿಕ್ಕನ್ನೇ ಬದಲಿಸುವ ಸಾಧ್ಯತೆಯಿದೆ.

ಮೊದಲನೆಯದಾಗಿ, ಉತ್ತರ ಕರ್ನಾಟಕದ ಜೀವನಾಡಿ ಎಂದೇ ಕರೆಯಲ್ಪಡುವ ಕೃಷ್ಣಾ ಮೇಲ್ದಂಡೆ ಯೋಜನೆಗೆ (UKP) ಇದುವರೆಗೂ ಆಡಳಿತ ನಡೆಸಿದ ಯಾವುದೇ ಸರ್ಕಾರಗಳು ಪೂರ್ಣ ಪ್ರಮಾಣದಲ್ಲಿ ನ್ಯಾಯ ಒದಗಿಸಿಲ್ಲ ಎಂಬುದು ಜನರ ಅತಿದೊಡ್ಡ ಅಸಮಾಧಾನವಾಗಿದೆ. ಈ ಯೋಜನೆಗೆ ಇನ್ನೂ ಬರೋಬ್ಬರಿ 1 ಲಕ್ಷದ 30 ಸಾವಿರ ಎಕರೆ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಉಳಿದಿದ್ದು, ಕಾಮಗಾರಿ ಮಂದಗತಿಯಲ್ಲಿ ಸಾಗಿದೆ.

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ಇದರ ಜೊತೆಗೆ, ಆಲಮಟ್ಟಿ ಜಲಾಶಯಕ್ಕಾಗಿ ತಮ್ಮ ಅಮೂಲ್ಯವಾದ ಭೂಮಿಯನ್ನು ಕಳೆದುಕೊಂಡ ರೈತರ ಕಣ್ಣೀರು ಇನ್ನೂ ಒರೆಸಲಾಗಿಲ್ಲ. ಎಕರೆ ನೀರಾವರಿ ಭೂಮಿಗೆ 40 ಲಕ್ಷ ರೂ. ಹಾಗೂ ಒಣ ಬೇಸಾಯದ ಭೂಮಿಗೆ ಎಕರೆಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸರ್ಕಾರಗಳು ಕೇವಲ ಬಾಯಿಮಾತಿನ ಘೋಷಣೆ ಮಾಡಿವೆ ವಿನಃ, ವಾಸ್ತವದಲ್ಲಿ ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ ಇನ್ನೂ ಆರಂಭವೇ ಆಗಿಲ್ಲ. ಹಾಗೆಯೇ, ಜಲಾಶಯದ ನಿರ್ಮಾಣಕ್ಕಾಗಿ ತಮ್ಮ ಮನೆ-ಮಠಗಳನ್ನು ಕಳೆದುಕೊಂಡ ಸಂತ್ರಸ್ತರ ಪಾಡು ಹೇಳತೀರದಾಗಿದೆ. ದಶಕಗಳೇ ಕಳೆದರೂ ಈ ಸಂತ್ರಸ್ತರಿಗೆ ಸುಸಜ್ಜಿತವಾದ ಮೂಲಸೌಕರ್ಯಗಳಿರುವ ಪುನರ್ವಸತಿ ಕೇಂದ್ರಗಳನ್ನು ನಿರ್ಮಿಸಿ, ಸಮರ್ಪಕವಾಗಿ ಸ್ಥಳಾಂತರ ಮಾಡಿಲ್ಲ ಎಂಬುದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

ALSO READ :  ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಬಹುತೇಕ ಮಾದ್ಯಮಗಳು ಎಡವಿದ್ದೆಲ್ಲಿ?! ಪೂರ್ವಾಗ್ರಹಕ್ಕೆ ಒಳಗಾಗಿದ್ದೆಲ್ಲಿ!? ಕೋರ್ಟ್‌ ಗಳಾಗಿದ್ದೆಲ್ಲಿ.?!

ಇನ್ನು ಉದ್ಯೋಗದ ವಿಚಾರಕ್ಕೆ ಬಂದರೆ, ಇಡೀ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಸಬಲ್ಲಂತಹ ಬೃಹತ್ ಕೈಗಾರಿಕೆಗಳೇ ಇಲ್ಲ. ದುಡಿಯುವ ಕೈಗಳಿಗೆ ಸ್ಥಳೀಯವಾಗಿ ಕೆಲಸವಿಲ್ಲದೆ, ಯುವಜನತೆ ಕಂಗಾಲಾಗಿದ್ದಾರೆ. ಹೊಟ್ಟೆಪಾಡಿಗಾಗಿ, ತುತ್ತಿನ ಚೀಲ ತುಂಬಿಸಿಕೊಳ್ಳಲು ಅನಿವಾರ್ಯವಾಗಿ ಬೆಂಗಳೂರು, ಮುಂಬೈ, ಗೋವಾ ಮುಂತಾದ ಕಡೆಗಳಿಗೆ ವಲಸೆ ಹೋಗುವ ಶೋಚನೀಯ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಜಿಲ್ಲೆಯ ಆರ್ಥಿಕ ಮಟ್ಟ ಸುಧಾರಿಸಲು ಬೃಹತ್ ಕೈಗಾರಿಕೆಗಳ ಸ್ಥಾಪನೆ ಅತ್ಯಂತ ತುರ್ತು ಅವಶ್ಯಕತೆಯಾಗಿದೆ.

ಕೇಂದ್ರೀಯ ಮಾರುಕಟ್ಟೆ ಜನರ ದಶಕದ ಬೇಡಿಕೆ

ಆಲಮಟ್ಟಿ ಜಲಾಶಯದ ಹಿನ್ನೀರು ಮುಳುಗಡೆ ಹಿನ್ನೆಲೆಯಲ್ಲಿ ಸ್ಥಳಾಂತರಗೊಂಡ ಬಾಗಲಕೋಟೆ ನಗರಕ್ಕೆ ಇಂದಿಗೂ ಒಂದು ಸುಸಜ್ಜಿತವಾದ ಕೇಂದ್ರೀಯ ಮಾರುಕಟ್ಟೆ (ಸೆಂಟ್ರಲ್ ಮಾರ್ಕೆಟ್) ಇಲ್ಲದಿರುವುದು ವ್ಯಾಪಾರಿಗಳ ಮತ್ತು ರೈತರ ಪಾಲಿಗೆ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ವ್ಯಾಪಾರ-ವಹಿವಾಟಿನಲ್ಲಿ ಭಾರಿ ಪ್ರಮಾಣದ ಕುಸಿತ ಉಂಟಾಗಿದೆ. ಬಾಗಲಕೋಟೆಯ ಹಳೆ ನಗರ, ವಿದ್ಯಾಗಿರಿ ಹಾಗೂ ನವನಗರ- ಈ ಮೂರು ಸ್ಥಳಗಳ ಮಧ್ಯಭಾಗದಲ್ಲಿ ಬೃಹತ್ ಸೆಂಟ್ರಲ್ ಮಾರ್ಕೆಟ್ ಆರಂಭಿಸಬೇಕೆಂಬುದು ಜನರ ಬಹುಕಾಲದ ಒತ್ತಾಯವಾಗಿದೆ.

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಜಿಲ್ಲೆಯ ಭೌಗೋಳಿಕ ಅನುಕೂಲತೆಗಳ ಬಗ್ಗೆ ಗಮನಹರಿಸಿದರೆ, ಬಾಗಲಕೋಟೆಯಲ್ಲಿ ಕೃಷ್ಣಾ, ಮಲಪ್ರಭಾ ಮತ್ತು ಘಟಪ್ರಭಾ ಎಂಬ ಮೂರು ಪ್ರಮುಖ ನದಿಗಳು ಹರಿಯುತ್ತವೆ. ಇಷ್ಟೆಲ್ಲಾ ಜಲಸಂಪನ್ಮೂಲವಿದ್ದರೂ, ಜಿಲ್ಲೆಯಲ್ಲಿ ಸಮಗ್ರ ನೀರಾವರಿ ವ್ಯವಸ್ಥೆ ಇಲ್ಲದಿರುವುದು ವಿಪರ್ಯಾಸ. ಹರಿಯುವ ನದಿಗಳ ನೀರನ್ನು ಸದ್ಬಳಕೆ ಮಾಡಿಕೊಂಡು ಕೃಷಿ ಭೂಮಿಗೆ ಹರಿಸುವಲ್ಲಿ ಆಳುವ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ.

ಒಟ್ಟಾರೆಯಾಗಿ, ಈ ಬಾರಿಯ ಬಾಗಲಕೋಟೆ ಉಪಚುನಾವಣೆಯು ಕೇವಲ ರಾಜಕೀಯ ಪಕ್ಷಗಳ ಪ್ರತಿಷ್ಠೆಯ ಕಣವಾಗಿರದೆ, ಜನರ ಹಕ್ಕುಗಳ ಹೋರಾಟದ ವೇದಿಕೆಯಾಗಿ ಮಾರ್ಪಟ್ಟಿದೆ. ಜ್ವಲಂತ ಸಮಸ್ಯೆಗಳಿಗೆ ಸ್ಪಷ್ಟ ಪರಿಹಾರ ನೀಡುವ ನಾಯಕರಿಗಾಗಿ ಮತದಾರರು ಎದುರು ನೋಡುತ್ತಿದ್ದಾರೆ.


Political News

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

ದಾವಣಗೆರೆ ದಕ್ಷಿಣದಲ್ಲಿ ಜಮೀರ್ ಗೈರುಹಾಜರಿ: ಸಮರ್ಥ್ ಶಾಮನೂರು ಗೆಲುವಿಗೆ ಮುಸ್ಲಿಂ ಮತಗಳೇ ಅಡ್ಡಿ?

‘ಪರಿಶ್ರಮ’ದ ಹೆಸರಲ್ಲಿ ಪ್ರದೀಪ್ ಈಶ್ವರ್ ರಾಜಕೀಯ ಪಾರುಪತ್ಯ? – ತೆರೆ ಮರೆಯ ಕರಾಳ ಸತ್ಯ ಬಯಲು!

ವಿಶ್ವ ರಾಜಕಾರಣದಲ್ಲಿ ಹೊಸ ಸಮೀಕರಣ: ಟ್ರಂಪ್-ಮೋದಿ ಕಾಲ್‌ನಲ್ಲಿ ಎಲಾನ್ ಮಸ್ಕ್ ಎಂಟ್ರಿ!

Scroll to Top