VITM Recruitment 2026: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಬೆಂಗಳೂರಿನ ಪ್ರತಿಷ್ಠಿತ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ – Visvesvaraya Industrial and Technological Museum, Bangalore (VITM) ನಲ್ಲಿ 2026ನೇ ಸಾಲಿನ ನೇಮಕಾತಿ ಆರಂಭವಾಗಿದೆ. SSLC, PUC, ITI ಮತ್ತು ಪದವೀಧರರಿಗೆ ಬೆಂಗಳೂರು ಹಾಗೂ ಕಲಬುರಗಿಯಲ್ಲಿ ಆಫೀಸ್ ಅಸಿಸ್ಟೆಂಟ್, ಟೆಕ್ನಿಷಿಯನ್ ಸೇರಿದಂತೆ 13 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದವರಿಗೆ ₹19,900 ರಿಂದ ₹92,300 ವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ. 18 ರಿಂದ 35 ವರ್ಷದೊಳಗಿನ ಕರ್ನಾಟಕದ ಅರ್ಹ ಅಭ್ಯರ್ಥಿಗಳು 15-06-2026 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕೇಂದ್ರ ಸಂಸ್ಕೃತಿ ಸಚಿವಾಲಯದಡಿ ಬರುವ VITM, ದೇಶದ ಪ್ರಮುಖ ವಿಜ್ಞಾನ ವಸ್ತು ಸಂಗ್ರಹಾಲಯಗಳಲ್ಲಿ ಒಂದು. ಇಲ್ಲಿ ಖಾಲಿ ಇರುವ Artist, Office Assistant, Junior Stenographer, Technician Fitter ಮತ್ತು Carpenter ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದೆ.
ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಸಾಮಾನ್ಯ/OBC ಅಭ್ಯರ್ಥಿಗಳಿಗೆ ₹885 ಅರ್ಜಿ ಶುಲ್ಕ ಇದ್ದು, SC/ST/PwD ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ವಯೋಮಿತಿಯಲ್ಲಿ ಸರ್ಕಾರಿ ನಿಯಮಗಳ ಪ್ರಕಾರ ಸಡಿಲಿಕೆ ಅನ್ವಯವಾಗುತ್ತದೆ.
10ನೇ ತರಗತಿ ಪಾಸಾದವರಿಂದ ಪದವೀಧರರವರೆಗೆ ಬೇರೆ ಬೇರೆ ಹುದ್ದೆಗಳಿಗೆ ಅವಕಾಶ ಇರುವುದರಿಂದ, ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಕರ್ನಾಟಕದ ಯುವಕ-ಯುವತಿಯರಿಗೆ ಇದು ಸುವರ್ಣಾವಕಾಶ. ಬೆಂಗಳೂರಿನಲ್ಲಿ ಕೆಲಸ ಮಾಡುವ ಆಸೆ ಇರುವವರಿಗೆ ಇದು ಉತ್ತಮ ಆಯ್ಕೆ.
ಆಸಕ್ತ ಅಭ್ಯರ್ಥಿಗಳು VITM ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅಗತ್ಯ ದಾಖಲೆಗಳೊಂದಿಗೆ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ಫ್ಲಾಷ್ ನ್ಯೂಸ್ ಕನ್ನಡ ವೆಬ್‌ಸೈಟ್ ಕಡೆಯಿಂದ ಅಭ್ಯರ್ಥಿಗಳಿಗೆ ಆಲ್ ದಿ ಬೆಸ್ಟ್! ಒಳ್ಳೆಯದಾಗಲಿ
VITM Recruitment 2026 – VITM ನೇಮಕಾತಿ 2026: ಹುದ್ದೆಗಳ ವಿವರ
ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ – VITM ಇಲಾಖೆಯಲ್ಲಿ 2026ನೇ ಸಾಲಿಗೆ ಒಟ್ಟು 13 ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಖಾಲಿ ಇರುವ ಹುದ್ದೆಗಳು ಇಂತಿವೆ:
1. Artist A
2. Office Assistant Gr.III
3. Education Assistant A
4. Junior Stenographer
5. Technician A Fitter
6. Technician A Carpenter
ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
VITM Recruitment 2026: ವೇತನ ಶ್ರೇಣಿ ಮತ್ತು ಉದ್ಯೋಗ ಸ್ಥಳ
ಆಯ್ಕೆಯಾದ ಅಭ್ಯರ್ಥಿಗಳಿಗೆ VITM ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ *₹19,900 ರಿಂದ ₹92,300* ವರೆಗೆ ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ: ಈ ಹುದ್ದೆಗಳು ನಮ್ಮ ಕರ್ನಾಟಕದ ಬೆಂಗಳೂರು ಹಾಗೂ ಕಲಬುರಗಿಯಲ್ಲಿ ಖಾಲಿ ಇವೆ.
VITM Recruitment 2026: ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು?
VITM ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ 10ನೇ ತರಗತಿ / ದ್ವಿತೀಯ ಪಿಯುಸಿ / ITI / ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಪ್ರತಿ ಹುದ್ದೆಗೆ ಬೇರೆ ಬೇರೆ ಶೈಕ್ಷಣಿಕ ಅರ್ಹತೆ ನಿಗದಿಪಡಿಸಿರುವುದರಿಂದ, ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಕಡ್ಡಾಯವಾಗಿ ಪರಿಶೀಲಿಸಿ.
VITM ಹುದ್ದೆಗಳಿಗೆ ವಯೋಮಿತಿ ಮತ್ತು ಶುಲ್ಕ
ವಯೋಮಿತಿ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ. ಇಲಾಖೆಯ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗುತ್ತದೆ.
VITM Recruitment 2026 – Important Links
ಗಮನಿಸಿ: ಅರ್ಜಿ ಸಲ್ಲಿಸುವ ಮುನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ನೋಟಿಫಿಕೇಶನ್ ಚೆಕ್ ಮಾಡಿ.
ಅಧಿಕೃತ ಅಧಿಸೂಚನೆ PDF ಡೌನ್‌ಲೋಡ್: KFN-VITM-Notification-for-Office-Assistant-Technician-Vacancies
ಆನ್‌ಲೈನ್ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್: Apply Online
VITM ಅಧಿಕೃತ ವೆಬ್‌ಸೈಟ್: www.vitm.ac.in
ಅಧಿಕೃತ ವೆಬ್‌ಸೈಟ್ www.vitm.ac.in ಗೆ ಭೇಟಿ ನೀಡಿ “Career” ಅಥವಾ “Recruitment” ಸೆಕ್ಷನ್‌ನಲ್ಲಿ ಸರಿಯಾದ ಲಿಂಕ್ ಪಡೆದು ಅರ್ಜಿ ಸಲ್ಲಿಸಿ.
ಅರ್ಜಿ ಶುಲ್ಕ:
– ಸಾಮಾನ್ಯ / 2A/2B/3A/3B ವರ್ಗ: ₹ 885/-
– SC / ST / ಅಂಗವಿಕಲ ಅಭ್ಯರ್ಥಿಗಳಿಗೆ: ಶುಲ್ಕ ಇರುವುದಿಲ್ಲ ₹ 0/-
ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?
VITM ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಂತಿಮ ಮೆರಿಟ್ ಪಟ್ಟಿ ತಯಾರಿಸಲಾಗುತ್ತದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
1. ಮೊದಲ ಹಂತ: VITM ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
2. ಎರಡನೇ ಹಂತ: ನೀವು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನು ಖಚಿತಪಡಿಸಿಕೊಳ್ಳಿ.
3. ಮೂರನೇ ಹಂತ: ಹುದ್ದೆಗೆ ಬೇಕಾದ ಶೈಕ್ಷಣಿಕ ಅಂಕಪಟ್ಟಿ, ಆಧಾರ್, ಫೋಟೋ ಸೇರಿದಂತೆ ಎಲ್ಲ ದಾಖಲೆಗಳನ್ನು ಸಿದ್ಧವಿಟ್ಟುಕೊಳ್ಳಿ.
4. ನಾಲ್ಕನೇ ಹಂತ: ಆನ್‌ಲೈನ್ ಅರ್ಜಿ ನಮೂನೆಯಲ್ಲಿ ನಿಮ್ಮ ಹೆಸರು, ಮೊಬೈಲ್ ನಂಬರ್, ವಿಳಾಸ ಮತ್ತು ಇಮೇಲ್ ಐಡಿಯನ್ನು ಸರಿಯಾಗಿ ನಮೂದಿಸಿ.
5. ಐದನೇ ಹಂತ: ಎಲ್ಲ ಮಾಹಿತಿ ಸರಿಯಾಗಿದೆ ಎಂದು ಪರಿಶೀಲಿಸಿ, ಅರ್ಜಿ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿ. ಕೊನೆಯದಾಗಿ ಅರ್ಜಿಯ ಪ್ರಿಂಟ್ ತೆಗೆದು ನಿಮ್ಮ ಬಳಿ ಇಟ್ಟುಕೊಳ್ಳಿ.
ಮುಖ್ಯ ದಿನಾಂಕಗಳು: ಮರೆಯಬೇಡಿ
ಅರ್ಜಿ ಸಲ್ಲಿಸಲು ಆಸಕ್ತಿ ಇರುವವರು ಈ ದಿನಾಂಕಗಳನ್ನು ಗಮನದಲ್ಲಿಡಿ:
ವಿವರ | ದಿನಾಂಕ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 18-05-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-06-2026
ಮುಖ್ಯ ಸೂಚನೆ: ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುಂಚೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ತದನಂತರವೇ ಅರ್ಜಿ ಸಲ್ಲಿಸಿ.
