ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ!

ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ!

ಮೈಸೂರು ಸೇರಿದಂತೆ ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸೋಮವಾರ ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಈ ಮಾಡುವ ಮೂಲಕ ರಂಗಭೂಮಿ ಚಟುವಟಿಕೆಗಳಿಗೆ ದೊಡ್ಡ ಮಟ್ಟದಲ್ಲಿ ಚಾಲನೆ ನೀಡಿದ್ದಾರೆ.

ಮೈಸೂರು ರಂಗಾಯಣದ ನಿರ್ದೇಶಕರಾಗಿ ಸತೀಶ್ ತಿಪಟೂರು, ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಪ್ರಸನ್ನ ಡಿ ಸಾಗರ, ಕಲಬುರಗಿ ರಂಗಾಯಣದ ನಿರ್ದೇಶಕರಾಗಿ ಡಾ ಸುಜಾತ ಜಂಗಮ ಶೆಟ್ಟಿ, ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆಗೆ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕಡಕೋಳ, ಯಕ್ಷ ರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ವೆಂಕಟರಮಣ ಐತಾಳ ಅವರನ್ನು ನೇಮಕ ಮಾಡಲಾಗಿದೆ.

ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳಿಗೆ ವೇಗ ಕೊಡಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ. ಇದಲ್ಲದೆ ವಿವಿಧ ಅಕಾಡೆಮಿಗಳಲ್ಲಿ ಖಾಲಿ ಇದ್ದ ಸದಸ್ಯರ ನೇಮಕಾತಿ ಆದೇಶವನ್ನು ಸಹ ಹೊರಡಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಧಾರವಾಡ ರಂಗಾಯಣದ ನಿರ್ದೇಶಕರಾಗಿ ರಾಜು ತಾಳಿಕೋಟೆ, ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ, ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ ಸುಜಾತ ಜಂಗಮ ಶೆಟ್ಟಿ ಅವರನ್ನು ನೇಮಿಸಲಾಗಿದೆ.

Spread the love

Comments

No comments yet. Why don’t you start the discussion?

Leave a Reply

Your email address will not be published. Required fields are marked *