ರಾಜ್ಯದಲ್ಲಿ ಮತ್ತೆ ಕೊರೊನಾ ಹೆಚ್ಚಳ: ಸಾರ್ವಜನಿಕರಿಗೆ ಸಿಎಂ ಮನವಿ

0

ಬೆಂಗಳೂರು: ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು, ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದ್ರೆ ಜನತೆಯ ಸಹಕಾರವಿಲ್ಲದೇ ಇದು ಯಶಸ್ವಿಯಾಗಲ್ಲ. ಹೀಗಾಗಿ ರಾಜ್ಯದ ಜನರು ಎಲ್ಲಾ ಸುರಕ್ಷತಾ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸುವ ಮೂಲಕ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಂತೆ ರಾಜ್ಯದ ಜನರನ್ನು ಉದ್ದೇಶಿಸಿ ಪತ್ರದ ಮೂಲಕ ಮನವಿ ಮಾಡಿಕೊಂಡಿರುವ ಸಿಎಂ, ನಾಗರೀಕ ಬಂಧುಗಳೇ.. ಕೋವಿಡ್-19 ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆ ಮತ್ತೆ ತೀವ್ರವಾಗುತ್ತಿದೆ. ಸರ್ಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದ್ರೆ, ನಾಗರೀಕರ ಸಹಕಾರವಿಲ್ಲದೆ ಇದು ಯಶಸ್ವಿಯಾಗದು. ಮಾಸ್ಕ್ ಧಾರಣೆ, ಸ್ವಚ್ಛತೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ನಮ್ಮ ಜೀವನಕ್ರಮವಾಗಲಿ, ಈ ಮುನ್ನೆಚ್ಚರಿಕೆಯ ಕ್ರಮಗಳ ನಿರ್ಲಕ್ಷ್ಯ ಸರ್ವಥಾ ಸಲ್ಲದು. ಹಿರಿಯ ನಾಗರೀಕರು, ಇತರ ಆರೋಗ್ಯ ಸಮಸ್ಯೆಯುಳ್ಳ 45 ರಿಂದ 60 ವರ್ಷದೊಳಗಿನ ವ್ಯಕ್ತಿಗಳು ತಪ್ಪದೇ ಲಸಿಕೆ ಪಡೆದುಕೊಂಡು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ಆದ್ರೇ ಮುನ್ನೆಚ್ಚರಿಕೆಯ ಕ್ರಮಗಳ ಪಾಲನೆಯ ನಿರಂತರವಾಗಿ ಮುಂದುವರೆಯಲಿ. ಸಾರ್ವಜನಿಕ ಸ್ಥಳಗಳಲ್ಲಿ ಈ ಕ್ರಮಗಳನ್ನು ತಪ್ಪದೇ ಪಾಲಿಸುವ ಮೂಲಕ, ನಮ್ಮ ಜವಾಬ್ದಾರಿಯನ್ನು ನಿರ್ವಹಿಸೋಣ. ಕೋವಿಡ್-19 ನಿಯಂತ್ರಿಸೋಣ ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.

Spread the love
Leave A Reply

Your email address will not be published.

Flash News