ಸಿಲಿಕಾನ್ ‌ಸಿಟಿಯಲ್ಲಿ ಕೊರೊನಾ ಸ್ಪೋಟ: ಇನ್ಮುಂದೆ ಟಫ್ ರೂಲ್ಸ್ ಜಾರಿ?

0

ಬೆಂಗಳೂರು: ರಾಜ್ಯದಲ್ಲಿ ಇಂದು  ಹೊಸದಾಗಿ 2,298 ಜನರಿಗೆ ಕೊರೊನಾ ಕಾಣಿಸಿಕೊಂಡಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,75,955ಕ್ಕೆ ಏರಿಕೆಯಾಗಿದೆ ಹಾಗೂ ಕೊರೊನಾ ಸೋಂಕಿನಿಂದ 12 ಜನರ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೊನಾಗೆ 12,461 ಜನರು ಬಲಿಯಾಗಿದ್ದಾರೆ. ಸೋಂಕಿತರ ಪೈಕಿ 9,46,589 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 16,886 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 1,398 ಜನರಿಗೆ ಸೋಂಕು ಪತ್ತೆಯಾಗಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,21,236ಕ್ಕೆ ಏರಿದೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 7 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೊನಾಗೆ ಇದುವರೆಗೆ 4,563 ಜನರು ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ.

Spread the love
Leave A Reply

Your email address will not be published.

Flash News