ಕೆಜಿಎಫ್-2 ಡಬ್ಬಿಂಗ್ ನಲ್ಲಿ ರಾಕಿ ಭಾಯ್..

0

ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್-2 ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರ್ಜರಿಯಾಗಿ ನಡೆಯುತ್ತಿದ್ದು, ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರು ಸದ್ಯ ತೆಲುಗು ಸಿನಿಮಾದಲ್ಲಿ ಬ್ಯುಸಿಯಾಗಿದ್ದರೂ ಕೆಜಿಎಫ್2 ಕೆಲಸಗಳನ್ನು ಮಾಡುತ್ತಿದ್ದಾರೆ. ಕೆಜಿಎಫ್-2 ಚಿತ್ರದ ಕೆಲಸಗಳು ಸರಾಗವಾಗಿ ಸಾಗುತ್ತಿದ್ದು ಸದ್ಯ ಡಬ್ಬಿಂಗ್ ಕೆಲಸ ಶುರುವಾಗಿದೆ. ಈಗಾಗಲೇ ನಟಿ ಶ್ರೀನಿಧಿ ಶೆಟ್ಟಿ ಡಬ್ಬಿಂಗ್ ನಲ್ಲಿ ಭಾಗಿಯಾಗಿದ್ದು, ತನ್ನ ಪಾತ್ರಕ್ಕೆ ಧ್ವನಿ ನೀಡುತ್ತಿದ್ದಾರೆ. ಇತ್ತೀಚಿಗಷ್ಟೆ ಶ್ರೀನಿಧಿ ಶೆಟ್ಟಿ ಡಬ್ಬಿಂಗ್ ಮಾಡುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.ಇದೀಗ ಡಬ್ಬಿಂಗ್ ಸ್ಟುಡಿಯೋಗೆ ರಾಕಿಂಗ್ ಸ್ಟಾರ್ ಎಂಟ್ರಿಯಾಗಿದೆ. ರಾಕಿ ಭಾಯ್ ತನ್ನ ಪಾತ್ರಕ್ಕೆ ಡಬ್ ಮಾಡುವ ಕೆಲಸ ಶುರುವಾಗಿದ್ದು, ನಿರ್ದೇಶಕ ಪ್ರಶಾಂತ್ ನೀಲ್ ಫೋಟೋ ಹಂಚಿಕೊಂಡಿದ್ದಾರೆ. ಪ್ರಶಾಂತ್ ನೀಲ್ ಹೆಗಲ ಮೇಲೆ ಕೈ ಹಾಕಿ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ, ‘ರಾಕಿ ಜೊತೆ ಡಬ್ಬಿಂಗ್ ಮಾಡುವುದು ಯಾವಾಗಲೂ ರಾಕಿಂಗ್’ ಎಂದು ಬರೆದುಕೊಂಡಿದ್ದಾರೆ.
ಪ್ರಶಾಂತ್ ನೀಲ್ ಪೋಸ್ಟ್ ಗೆ ಅಭಿಮಾನಿಗಳು ಕೆಜಿಎಫ್-2 ಬಗ್ಗೆ ಅಪ್ ಡೇಟ್ ನೀಡಿ ಎಂದು ಕೇಳಿಕೊಳ್ಳುತ್ತಿದ್ದಾರೆ. ಅಂದಹಾಗೆ ಯಶ್ ಕನ್ನಡಕ್ಕೆ ಮಾತ್ರ ಡಬ್ಬಿಂಗ್ ಮಾಡುತ್ತಾರಾ ಬೇರೆ ಭಾಷೆಗೂ ಯಶ್ ಅವರೇ ಡಬ್ ಮಾಡುತ್ತಾರಾ ಎನ್ನುವುದು ಕುತೂಹಲ ಮೂಡಿಸಿದೆ. ಇನ್ನು ಇತ್ತೀಚಿಗೆ ಚಿತ್ರತಂಡ ಸಿನಿಮಾದ ಪ್ರಮೋಷನ್ ಕೆಲಸಗಳ ಬಗ್ಗೆ ಮಾತುಕತೆ ನಡೆಸುತ್ತಿತ್ತು. ಚಿತ್ರದ ಪ್ರಿ ರಿಲೀಸ್ ಈವೆಂಟ್ ಸೇರಿದಂತೆ ಬೇರೆ ಬೇರೆ ಭಾಷೆಯಲ್ಲಿ ಪ್ರಮೋಷನ್ ಮಾಡುವ ಬಗ್ಗೆ ಚಿತ್ರತಂಡ ಪ್ಲಾನ್ ಮಾಡುತ್ತಿದೆ. ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾ ಜುಲೈ 16ಕ್ಕೆ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

Spread the love
Leave A Reply

Your email address will not be published.

Flash News