ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನೆ ಮುಂದೆ ಪೊಲೀಸ್ ಬಿಗಿ ಭದ್ರತೆ..

0

ಬೆಂಗಳೂರು: ಆರೋಗ್ಯ ಸಚಿವ ಡಾ. ಸುಧಾಕರ್‌ ಅವರು ನೀಡಿದ್ದ ಏಕಪತ್ನಿ ವ್ರತಸ್ಥ ಕುರಿತಾದ ಹೇಳಿಕೆಯನ್ನು ಖಂಡಿಸಿ ಸರಣಿ ಧರಣಿಗಳನ್ನು ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಸಚಿವ ಸುಧಾಕರ್ ಅಧಿಕೃತ ನಿವಾಸಕ್ಕೆ ಪೊಲೀಸ್ ಭದ್ರತೆ ನೀಡಲಾಗಿದೆ. 10ಕ್ಕೂ ಹೆಚ್ಚು ಪೊಲೀಸರನ್ನು ಡಾ. ಸುಧಾಕರ್ ಅವರ ಮನೆ ಮುಂದೆ ಭದ್ರೆತೆಯ ನೆಲೆಗಟ್ಟಿನಲ್ಲಿ ನಿಯೋಜನೆ ಮಾಡಲಾಗಿದೆ.
ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಕುಮಾರಸ್ವಾಮಿ, ರಮೇಶ್‌ಕುಮಾರ್ ಸತ್ಯಹರಿಶ್ಚಂದ್ರರಾ? ಇವರೆಲ್ಲರೂ ಏಕಪತ್ನಿ ವ್ರತ ಮಾಡುತ್ತಿದ್ದಾರಾ? ನಾನೂ ಸೇರಿದಂತೆ 224 ಶಾಸಕ ಮೇಲೆಯೂ ತನಿಖೆಯಾಗಲಿ. ಎಲ್ಲರನ್ನು ತನಿಖೆ ಮಾಡಿದಾಗ ಬಂಡವಾಳ ಗೊತ್ತಾಗುತ್ತೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಹಾಲಿ ಬೆಳವಣಿಗೆಗಳ ಬಗ್ಗೆ ಮಾತನಾಡುತ್ತಾ ಪಂಥಾಹ್ವಾನ ನೀಡಿದ್ದರು. ಈ ವಿಚಾರದ ಬಗ್ಗೆ

ತೀವ್ರ ಆಕ್ರೋಶ/ವಿರೋಧ ವ್ಯಕ್ತವಾಗಿತ್ತು. ಅವರ ಈ ಹೇಳಿಕೆಗೆ ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಇನ್ನು ಈ ವಿಚಾರವಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಸಚಿವ ಡಾ.ಕೆ.ಸುಧಾಕರ್​ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದರು. ಆರೋಗ್ಯ, ವೈದ್ಯಕೀಯ ಶಿಕ್ಷಣ ಖಾತೆ ಸಚಿವರ ಹೇಳಿಕೆ ತಪ್ಪು. ಇದು ಮೂರ್ಖತನದ ಪರಮಾವಧಿ. ಎಲ್ಲಾ 224 ಶಾಸಕರಲ್ಲಿ ಡಾ.ಸುಧಾಕರ್​ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ರು.

Spread the love
Leave A Reply

Your email address will not be published.

Flash News