ರಾಬರ್ಟ್​ ನ ವಿಜಯಯಾತ್ರೆ ಕೋರೊನಾಸುರನಿಂದ ರದ್ದು..

0

ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅಭಿನಯದ ರಾಬರ್ಟ್​ ಸಿನಿಮಾ ಭಾರೀ ಯಶಸ್ಸು ಕಂಡಿತ್ತು. ಬಾಕ್ಸ್​ ಆಫೀಸ್​ನಲ್ಲೂ ಈ ಸಿನಿಮಾ ದೊಡ್ಡ ಮಟ್ಟದ ಕಲೆಕ್ಷನ್​ ಮಾಡಿತ್ತು. ಈ ಸಿನಿಮಾ ದರ್ಶನ್​ ವೃತ್ತಿ ಜೀವನಕ್ಕೆ ದೊಡ್ಡ ಮೈಲೇಜ್​ ನೀಡಿದೆ. ಇದೇ ಖುಷಿಗೆ ಅಭಿಮಾನಿಗಳಿಗೆ ಧನ್ಯವಾದ ಹೇಳಲು ದರ್ಶನ್​ ಸಜ್ಜಾಗಿದ್ದರು. ಆದರೆ, ಇದೀಗ ಕೊರೊನಾ ವೈರಸ್​ ಹೆಚ್ಚುತ್ತಿರುವುದರಿಂದ ಚಿತ್ರತಂಡ ವಿಜಯ ಯಾತ್ರೆಯನ್ನು ರದ್ದು ಮಾಡಿದೆ.
ರಾಬರ್ಟ್​ ಸಿನಿಮಾ ಗೆದ್ದರೆ ರಾಜ್ಯಾದ್ಯಂತ ಸಂಚರಿಸಿ ವಿಜಯ ಯಾತ್ರೆ ಮಾಡಬೇಕು ಎಂಬ ಆಲೋಚನೆ ಚಿತ್ರತಂಡಕ್ಕಿತ್ತು. ಮಾ.29ರಿಂದ ದರ್ಶನ್​ ರಾಜ್ಯ ಸಂಚಾರ ಶುರು ಮಾಡುವುದಾಗಿ ಹೇಳಿದ್ದರು. ಮಾ.29ರಂದು ತುಮಕೂರು, ಚಿತ್ರದುರ್ಗ, ದಾವಣಗೆರೆಗೆ, ಮಾ.30ರಂದು ಧಾರವಾಡ, ಹುಬ್ಬಳ್ಳಿ, ಹಾವೇರಿಗೆ ಮಾ.31ರಂದು ತಿಪಟೂರು, ಹಾಸನ ಹಾಗೂ ಶಿವಮೊಗ್ಗ, ಏ.1ರಂದು ಗಂಡ್ಲುಪೇಟೆ, ಮಂಡ್ಯ, ಮೈಸೂರು ಹಾಗೂ ಮದ್ದೂರಿಗೆ ಡಿ ಬಾಸ್​ ಭೇಟಿ ನೀಡಬೇಕಿತ್ತು. ಆದರೆ, ವಿಜಯ ಯಾತ್ರೆ ರದ್ದಾಗಿರುವ ಬಗ್ಗೆ ದರ್ಶನ್​ ಟ್ವೀಟ್​ ಮಾಡಿದ್ದಾರೆ. ಎಲ್ಲರಿಗೂ ನಮಸ್ಕಾರ. ನೀವು ನಮ್ಮ ಚಿತ್ರಕ್ಕೆ ಅಪಾರ ಬೆಂಬಲವನ್ನು ನೀಡಿ ದೊಡ್ಡ ಮಟ್ಟದ ಯಶಸ್ಸಿಗೆ ಕಾರಣರಾಗಿದ್ದೀರಿ. ಅದಕ್ಕೆಂದೇ ವಿಜಯಯಾತ್ರೆ ಮೂಲಕ ನಿಮ್ಮ ಊರಿಗೆ ಬಂದು ಧನ್ಯವಾದಗಳು ಸಲ್ಲಿಸಬೇಕೆಂದು ವೇಳಾಪಟ್ಟಿ ರೆಡಿ ಮಾಡಿಕೊಂಡಿದ್ದೆವು. ಈ ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಕಾರಣ, ಎಲ್ಲೆಡೆ ಹೋಗಲು ಅನುಮತಿ ಸಿಗುವುದು ಕಷ್ಟವಾಗಿದೆ ಎಂದು ಬರೆದುಕೊಂಡಿದ್ದಾರೆ.

Spread the love
Leave A Reply

Your email address will not be published.

Flash News