1 ರಿಂದ 9 ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ದೇ ಪಾಸ್ ಮಾಡೋದು ಡೌಟೇ..

0

ಬೆಂಗಳೂರು: ಒಂದರಿಂದ ಒಂಬತ್ತನೇ ತರಗತಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಿಸುವ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೊರೋನಾ  ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಸುಧಾಕರ್ ಅವರು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲು ತೀರ್ಮಾನಿಸಿದ್ದು, ಈ ಕುರಿತು ಸಿಎಂ ಬಳಿ ಸೋಮವಾರ ಚರ್ಚೆ ಮಾಡುವುದಾಗಿ ಹೇಳಿದ್ದರು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಸಿದ್ಧತೆ ನಡೆಸುತ್ತಿದೆ.

ಪರೀಕ್ಷೆ ಇಲ್ಲದೆಯೇ ಪಾಸ್ ಮಾಡುವ ಯಾವುದೇ ಪ್ರಸ್ತಾಪ ನಮ್ಮ ಮುಂದೆ ಇಲ್ಲ ಎಂದರು.
ನಾವು ಆ ಬಗ್ಗೆ ತೀರ್ಮಾನಿಸಿಲ್ಲ. ಈ ಕುರಿತು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತ ನಿರ್ಧಾರಗಳನ್ನು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Spread the love
Leave A Reply

Your email address will not be published.

Flash News