ರಾಜ್ಯದಲ್ಲಿ ಲಾಕ್ ಡೌನ್ ಇಲ್ವಂತೆ.. ಮಾಸ್ಕ್ ಹಾಕದಿದ್ರೆ ಕಠಿಣ ಕ್ರಮ..

0

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್‌ಡೌನ್ ಜಾರಿಗೊಳಿಸುವುದಿಲ್ಲ. ಆದರೆ ಇಂದಿನಿಂದ 15 ದಿನ ಸತ್ಯಾಗ್ರಹ, ಚಳವಳಿಗಳನ್ನು ನಡೆಸುವಂತಿಲ್ಲ. ಕೊವಿಡ್​ ನಿಯಂತ್ರಿಸಲು ಸಾರ್ವಜನಿಕರು ಜಾಗೃತರಾಗಿರಬೇಕು. ಎಲ್ಲರೂ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ನಾಳೆಯಿಂದ ಮಾಸ್ಕ್​ ಧರಿಸದವರಿಗೆ ದಂಡ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬರೆದಿದ್ದ ರಾಜ್ಯದ ಜನರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ಬಗ್ಗೆ ಬರೆದ ಪತ್ರವನ್ನು ಓದಿದ ಸಿಎಂ ಯಡಿಯೂರಪ್ಪ, ಜನರನ್ನು ಭಯ ಪಡಿಸದೇ ಕೆಲ ನಿರ್ಣಯಗಳನ್ನ ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಮಾಸ್ಕ್, ಸ್ಯಾನಿಟೈಸರ್​ ಮತ್ತು ಲಸಿಕೆ ಹೆಚ್ಚಳ ಮಾಡುವ ಬಗ್ಗೆ ಸಲಹೆ ನೀಡಿದ್ದರು. ಅದನ್ನು ಕೂಡ ನಿಮ್ಮ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದರು.
ಸಂಪರ್ಕಿತರ ಪತ್ತೆಗೆ ಕಂದಾಯ ಇಲಾಖೆ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತದೆ. ಖಾಸಗಿ ಆಸ್ಪತ್ರೆಗಳಿಗೂ ಬೆಡ್​ಗಳನ್ನು ನೀಡಲು ತಿಳಿಸಲಾಗಿದೆ. ಕೊವಿಡ್ ನಿಯಂತ್ರಣಕ್ಕೆ ಯಾವುದೇ ಹಣದ ಸಮಸ್ಯೆ ಇಲ್ಲ. ಸದ್ಯದ ಸಮಾಧಾನದ ವಿಚಾರವೆಂದರೆ ಸ್ಲಂಗಳಲ್ಲಿ ಕೊರೊನಾ ಪ್ರಕರಣಗಳು ಬಹಳ ವಿರಳವಾಗಿದ್ದು, ಅಪಾರ್ಟ್​ಮೆಂಟ್​ಗಳಲ್ಲಿ ಹೆಚ್ಚಳವಾಗುತ್ತಿದೆ. ಹೀಗಾಗಿ, ಅಪಾರ್ಟ್​ಮೆಂಟ್​ಗಳಲ್ಲಿ ಲಸಿಕೆ ವಿತರಣೆ ಪ್ರಮಾಣವನ್ನು ಹೆಚ್ಚಿಸುತ್ತೇವೆ. ಪ್ಲಾಟ್​ಗಳಲ್ಲಿ ಬೇರೆ ಬೇರೆ ಪಾರ್ಟಿಗಳನ್ನು ಮಾಡಲು ಇನ್ಮುಂದೆ ಅವಕಾಶವಿಲ್ಲ ಎಂದು ತಿಳಿಸಿದರು.

Spread the love
Leave A Reply

Your email address will not be published.

Flash News