ಸಿಡಿ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ಸಿಎಂ

0
  1. ಸಿ.ಡಿ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇದರಲ್ಲಿ ಎಸ್‌ಐಟಿ ಸಂಪೂರ್ಣ ನಿಷ್ಪಕ್ಷಪಾತ ತನಿಖೆ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದರು.
    ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಪೊಲೀಸ್ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ತನಿಖೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ನವರು ಇದರಲ್ಲಿ ದುರುದ್ದೇಶದ ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ತಾವು ಮೌನವಾಗಿರುವ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ ಮಾಡಿದ್ದಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ನಾನು ಪ್ರತಿದಿನ ಗೃಹ ಸಚಿವರಿಂದ ಇದರ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ.ಈ ಪ್ರಕರಣದಲ್ಲಿ ರಮೇಶ ಜಾರಕಿಹೊಳಿ ನಿರಪರಾಧಿಯಾಗಿ ಹೊರಬರುತ್ತಾರೆ. ಅವರಿಗೆ ಉಪಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲು ಹೇಳಿದ್ದೇನೆ ಎಂದರು.
    ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಮಂಗಲಾ ಅಂಗಡಿ ಅವರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
Spread the love
Leave A Reply

Your email address will not be published.

Flash News