ಕೊರೊನಾ ಬಗ್ಗೆ ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಆರೋಗ್ಯ ಕೇಂದ್ರ ಇಲಾಖೆ

0

ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ -2ನೇ ಅಲೆ ಪ್ರಾರಂಭವಾಗಿದ್ದು, ದೇಶದ ಜನತೆ ಆತಂಕದಲ್ಲಿದೆ.ಇದರ ನಡುವೆ ಕೇಂದ್ರ ಆರೋಗ್ಯ ಸಚಿವಾಲಯ ಆಘಾತಕಾರಿ ಮಾಹಿತಿ ಬಿಚ್ಚಿಟ್ಟಿದೆ. ದೇಶದಲ್ಲಿ ಕೋವಿಡ್ 19 ಪರಿಸ್ಥಿತಿ ಗಂಭೀರವಾಗಿದ್ದು, 10 ಜಿಲ್ಲೆಗಳಲ್ಲಿ ತೀರಾ ಹದಗೆಟ್ಟಿದೆ ಎಂದು ಹೇಳಿದೆ. ಬೆಂಗಳೂರು ನಗರ ಸೇರಿದಂತೆ ದೇಶದ 10 ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಅತಿ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಪುಣೆ, ಮುಂಬೈ, ನಾಗಪುರ, ಥಾಣೆ, ನಾಸಿಕ್, ಔರಂಗಬಾದ್, ಬೆಂಗಳೂರು ನಗರ, ನಾಂದೇಡ್, ದೆಹಲಿ, ಅಹ್ಮದ್ ನಗರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಸೋಂಕಿತರು ಕಂಡು ಬಂದಿದ್ದಾರೆ ಎಂದು ಕೇಂದ್ರ ಇಲಾಖೆ ಹೇಳಿದೆ. ಕೊರೋನಾ ಸೋಂಕು ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಸೋಂಕು ಹರಡುವುದನ್ನು ತಡೆಯಲು ಕೊರೊನಾ ಟೆಸ್ಟ್ ಗಳನ್ನು ಹೆಚ್ಚಿಸಬೇಕು ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಖಡಕ್ ಸೂಚನೆ ನೀಡಿದೆ.

Spread the love
Leave A Reply

Your email address will not be published.

Flash News