ರಾಜ್ಯದಲ್ಲಿ ಇಂದು ದಾಖಲಾದ ಕೊರೊನಾ ಪ್ರಕರಣಗಳೆಷ್ಟು ಗೊತ್ತಾ..?

0

ಬೆಂಗಳೂರು: ರಾಜ್ಯದಲ್ಲಿ ಇಂದು 4234 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ 18 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ 12,585 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 10,01,238 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 1599 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 9,57,769 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ರಾಜ್ಯದಲ್ಲಿ ಒಟ್ಟು 30,865 ಸಕ್ರಿಯ ಪ್ರಕರಣಗಳು ಇದ್ದು, 265 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸ್ಪೋಟವಾಗಿದೆ. ಇವತ್ತು ಒಂದೇ ದಿನ 2906 ಜನರಿಗೆ ಸೋಂಕು ತಗಲಿದ್ದು, 11 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 21,789 ಸಕ್ರಿಯ ಪ್ರಕರಣಗಳು ಇವೆ.

Spread the love
Leave A Reply

Your email address will not be published.

Flash News