ಕೊರೊನಾ ತಡೆಗೆ ನ್ಯೂ ಗೈಡ್ ಲೈನ್ಸ್ ಜಾರಿ..

0

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟವಾಗಿದೆ.8 ಜಿಲ್ಲೆಗಳಲ್ಲಿ ಸಿನಿಮಾ ಹಾಲ್​, ಬಾರ್, ಪಬ್​, ಕ್ಲಬ್, ರೆಸ್ಟೋರೆಂಟ್​ಗೆ ಶೇ. 50ರಷ್ಟು ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಉಡುಪಿ, ಕಲಬುರಗಿ, ದಕ್ಷಿಣ ಕನ್ನಡ, ಬೀದರ್, ಧಾರವಾಡ ಜಿಲ್ಲೆಗಳಲ್ಲಿ ಈ ನಿಯಮಗಳು ಅನ್ವಯವಾಗಲಿದೆ.
ಅಲ್ಲದೆ, ರಾಜ್ಯಾದ್ಯಂತ ಜಿಮ್, ಸ್ವಿಮ್ಮಿಂಗ್ ಪೂಲ್​ಗಳು ಬಂದ್ ಆಗಲಿವೆ. 6ರಿಂದ 9ನೇ ತರಗತಿಯವರೆಗೆ ಶಾಲೆ ಬಂದ್, ವಿದ್ಯಾಗಮ ಸೇರಿದಂತೆ ಎಲ್ಲಾ ಶೈಕ್ಷಣಿಕ ಚಟುವಟಿಕೆ ಬಂದ್ ಆಗಲಿದೆ. ಏಪ್ರಿಲ್ 20ರವರೆಗೆ ಪ್ರಸ್ತುತ ಮಾರ್ಗಸೂಚಿ ಅನ್ವಯವಾಗಲಿದೆ. ಉಳಿದಂತೆ ಇತರ ನಗರಗಳ ಪಬ್‌, ಬಾರ್‌ಗಳಲ್ಲಿ ಮಾಸ್ಕ್‌, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು, ಜಾತ್ರೆ, ಮೇಳಗಳು, ಗುಂಪು ಸೇರುವುದು ನಿಷೇಧ ಮುಂದುವರಿಯಲಿದೆ. ಸಭೆ, ಸಮಾರಂಭ ಆಚರಣೆಗೆ ಮಾರ್ಚ್ 12ರ ಸುತ್ತೋಲೆ ಅನ್ವಯವಾಗಲಿದೆ.ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್, ಅಂತರ ಕಾಪಾಡಬೇಕು. ಇದನ್ನು ಪೊಲೀಸರು, ಸ್ಥಳೀಯ ಆಡಳಿತ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು ಎಂದು ಸೂಚಿಸಲಾಗಿದೆ. ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಅದರನ್ವಯ ಯಾವುದೇ ರೀತಿಯ ಱಲಿ, ಮುಷ್ಕರ, ಧರಣಿ ಇತ್ಯಾದಿ ನಿಷೇಧ ಮಾಡಲಾಗಿದೆ. ಸಾರಿಗೆ ಬಸ್‌ಗಳಲ್ಲಿ ನಿಗದಿತ ಆಸನದ ವ್ಯವಸ್ಥೆ ಮೀರುವಂತಿಲ್ಲ. ಸಾಧ್ಯವಾದಷ್ಟು ಮನೆಯಿಂದಲೇ ಕಚೇರಿ ಕೆಲಸ ಮಾಡಬೇಕು ಎಂದು ಸೂಚಿಸಿದೆ. ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ತರಗತಿಗಳಲ್ಲಿ, ಪರೀಕ್ಷೆ ಬರೆಯುವ ಹಾಗೂ ವೈದ್ಯ ಶಿಕ್ಷಣ ತರಗತಿ ಹೊರತುಪಡಿಸಿ ಇತರ ಎಲ್ಲಾ ರೀತಿಯ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ವಸತಿ ಶಾಲೆಗಳು ಹಾಗೂ ಬೋರ್ಡಿಂಗ್‌ ಇರುವ ಶಾಲೆಗಳಲ್ಲಿ, 10, 11, 12ನೇ ತರಗತಿಯ ಬೋರ್ಡ್‌ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಉನ್ನತ ಶಿಕ್ಷಣ, ವೃತ್ತಿಪರ ಕೋರ್ಸ್‌ ಪರೀಕ್ಷೆ ಬರೆಯುವವರು, ವೈದ್ಯ ಶಿಕ್ಷಣ ತರಗತಿ ಹೊರತುಪಡಿಸಿ ಉಳಿದ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ಮಾಲ್‌, ಮಾರ್ಕೆಟ್‌, ಡಿಪಾರ್ಟ್‌ಮೆಂಟ್‌ ಸ್ಟೋರ್‌ಗಳಲ್ಲಿ ಕೊವಿಡ್‌ ಮುನ್ನೆಚ್ಚರಿಕೆ ಕ್ರಮ ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸಿದ್ರೆ ಮಾಲ್‌, ಮಾರ್ಕೆಟ್​ಗಳನ್ನು ಕೊವಿಡ್ ಪರಿಸ್ಥಿತಿ ಕೊನೆಗೊಳ್ಳುವವರೆಗೂ ಮುಚ್ಚಲಾಗುತ್ತೆ ಎಂದು ಹೇಳಲಾಗಿದೆ.

Spread the love
Leave A Reply

Your email address will not be published.

Flash News