ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಸಂತ್ರಸ್ತ ಯುವತಿಯ ವಿಚಾರಣೆ ಓವರ್.. ಜಾರಕಿಹೊಳಿ ವಿಚಾರಣೆಗೆ ಆಬ್ಸೆಂಟ್..

0

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ

ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿ ಇಂದು  ಸಿಡಿಯಲ್ಲಿದ್ದ ಯುವತಿಯ ವಿಚಾರಣೆ ನಡೆಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಹಾಜರಾಗಿದ್ದ ಯುವತಿಯನ್ನು ಸತತ 7 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿದೆ. ವಿಚಾರಣೆ ಬಳಿಕ ಸಿಡಿ ಯುವತಿಯನ್ನು ಗೌಪ್ಯ ಸ್ಥಳಕ್ಕೆ ಕಳುಹಿಸಲಾಗಿದೆ. ಸಿಡಿಯಲ್ಲಿರುವ ಯುವತಿ ವಿಚಾರಣೆ ನಡೆಸಿದ್ದ ಎಸಿಪಿ ಕವಿತಾ, ವಿಚಾರಣೆಗೆ ಅಗತ್ಯವಿದ್ದಲ್ಲಿ ಮತ್ತೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಪ್ರಕರಣ ಸಂಬಂಧ ನಿನ್ನೆ (ಏಪ್ರಿಲ್ 1) ಎಸ್​ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದರು. ಸಂತ್ರಸ್ತೆ ವಾಸವಿದ್ದ ಸ್ಥಳ ಹಾಗೂ ಕೃತ್ಯ ನಡೆದಿದೆ ಎನ್ನಲಾದ ಸ್ಥಳದಲ್ಲಿ ಮಹಜರು ನಡೆಸಲಾಗಿತ್ತು. ಮಹಜರು ಸಂಬಂಧ ಇದ್ದ ಪ್ರಶ್ನೆಗಳಿಗೆ ಇಂದು ವಿಚಾರಣೆ ಮಾಡಲಾಯಿತು.  ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಲೈಂಗಿಕ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ನೊಟೀಸ್ ಜಾರಿ ಮಾಡಿತ್ತು. ಆದರೆ ಹನ್ನೆರಡು ಗಂಟೆ ಆದರೂ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗಿಲ್ಲ. ಈ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಪರ ವಕೀಲ ಶ್ಯಾಮ್ ಸುಂದರ್, ‘ತಮಗೆ ಅನಾರೋಗ್ಯ ಇದೆ ಎಂದು ರಮೇಶ್ ಜಾರಕಿಹೊಳಿ ಅವರು ಎಸ್ಐಟಿ ತಂಡಕ್ಕೆ ತಿಳಿಸಲು ಹೇಳಿದ್ದಾರೆ. ನಾನು ಅದನ್ನು ತನಿಖಾ ತಂಡಕ್ಕೆ ತಿಳಿಸಿದ್ದೇನೆ. ಸದ್ಯ ರಮೇಶ್ ಜಾರಕಿಹೊಳಿ ಗೋಕಾಕ್​ನಲ್ಲಿದ್ದಾರೆ. ಅನಾರೋಗ್ಯದ ಕಾರಣದಿಂದ ಎರಡು ದಿನ ವಿಚಾರಣೆಗೆ ಬರಲು ಆಗುವುದಿಲ್ಲ ಎಂದು ತನಿಖಾ ತಂಡಕ್ಕೆ ಹೇಳಿದ್ದೇವೆ. ಇನ್ನು ಎರಡು ಮೂರು ದಿನದಲ್ಲಿ ಅವರು ಬರುತ್ತಾರೆ’ ಎಂದು ಎಸ್​ಐಟಿ ತಂಡಕ್ಕೆ ತಿಳಿಸಿದ್ದಾಗಿ ಹೇಳಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಬಂಧನ ಮಾಡಬೇಕಾದರೆ ಬೆಂಗಳೂರಿಗೇ ಬಂದು ಬಂಧಿಸಬೇಕು ಎಂದಿಲ್ಲ. ಗೋಕಾಕ್​ನಲ್ಲಿ ಇದ್ದರೂ ಅಲ್ಲೇ ಹೋಗಿ ಬಂಧಿಸಬಹುದು ಎಂದೂ ವಕೀಲ ಶ್ಯಾಮ್ ಸುಂದರ್ ತಿಳಿಸಿದ್ದಾರೆ.

Spread the love
Leave A Reply

Your email address will not be published.

Flash News