ಕಲ್ಲಂಗಡಿ ಹಣ್ಣು ತಿಂದು ಬಾಲಕರಿಬ್ಬರ ದುರ್ಮರಣ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಸತ್ಯಕಥೆ..

0

ಹೈದರಾಬಾದ್: ಕಲ್ಲಂಗಡಿ ಹಣ್ಣು ತಿಂದ ಬಾಲಕರಿಬ್ಬರು ಸಾವಿಗೀಡಾಗಿರುವ ಘಟನೆ ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯಲ್ಲಿ ನಡೆದಿದ್ದು, ಮೂವರು ಸಾವು ಬದಕಿನ ಮಧ್ಯೆ ಹೋರಾಡುತ್ತಿದ್ದಾರೆ.
ಕಲ್ಲಂಗಡಿ ಹಣ್ಣು ತಿಂದರೆ ಯಾರಾದ್ರೂ ಸಾಯ್ತಾರಾ? ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುವುದು ಸಹಜ. ಆದರೆ, ಕಲ್ಲಂಗಡಿ ತಿಂದ ಮಕ್ಕಳು ಮೃತಪಟ್ಟಿದ್ದು ಹೇಗೆ ಎಂದು ತಿಳಿದರೆ ನಿಜಕ್ಕೂ ಶಾಕ್ ಆಗ್ತೀರಾ! ಪೆದ್ದಪಲ್ಲಿಯ ಇಸ್ಸಾಂಪೇಟಾ ಗ್ರಾಮದ ಕುಟುಂಬ ಮನೆಗೆ ಕಲ್ಲಂಗಡಿ ಹಣ್ಣನ್ನು ಕೊಂಡು ತಂದಿದ್ದಾರೆ. ಮೊದಲು ಅರ್ಧವನ್ನು ತಿಂದು, ಉಳಿದ ಅರ್ಧವನ್ನು ಕಪ್ಬೋರ್ಡ್ನಲ್ಲಿ ಇಟ್ಟಿದ್ದರು. ಮತ್ತೆ ರಾತ್ರಿ ಉಳಿದ ಹಣ್ಣನ್ನು ತಿಂದಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ನಡು ರಾತ್ರಿಯಲ್ಲಿ ಇಡೀ ಕುಟುಂಬ ನೋವಿನಿಂದ ನರಳಾಡಿದೆ. ತಕ್ಷಣ ಅವರನ್ನ ಕರೀಮ್ನಗರದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೇ ದರವೇಣಿ ಸಿವಾನಂದು, ಮತ್ತು ಚರಣ್ ಎಂಬ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಕುಟುಂಬದ ಉಳಿದ ಸದಸ್ಯರಾದ ಶ್ರೀಶೈಲಂ, ಗುಣವತಿ ಮತ್ತು ಅಜ್ಜಿ ಸರಮ್ಮಲ್ ಅವರಿಗೆ ಚಿಕಿತ್ಸೆ ಮುಂದುವರಿಸಿದ್ದು, ಸ್ಥಿತಿ ಗಂಭೀರವಾಗಿದೆ.
ನಿಗೂಢ ಸಾವಿನ ಪ್ರಕರಣದ ತನಿಖೆ ಬೆನ್ನತ್ತಿದ ಪೊಲೀಸರಿಗೆ ಸತ್ಯಾಂಶ ತಿಳಿದು ಶಾಕ್ ಆಯ್ತಂತೆ. ಆ ಮಕ್ಕಳ ಸಾವಿಗೆ ಇಲಿ ಕಾರಣ ಅನ್ನೋದು ತನಿಖೆಯಲ್ಲಿ ಬಯಲಾಗಿದೆ.
ಅದ್ಹೇಗೆ? ಇಲಿ ಕಾಟ ಹೆಚ್ಚಾಗಿದ್ದರಿಂದ ಅವುಗಳನ್ನು ಕೊಲ್ಲಲು ಇಲಿ ಪಾಶಾಣವನ್ನು ಮನೆಗೆ ತಂದಿದ್ದರು. ಇಲಿ ಪಾಶಾಣವನ್ನು ಸಿಂಪಡಿಸಿ ಉಳಿದದ್ದನ್ನು ಒಂದು ಕಪ್ಬೋರ್ಡ್ನಲ್ಲಿ ಇಟ್ಟಿದ್ದರು. ಇಲಿ ಮನೆಯಲ್ಲೆ ಓಡಾಗಿ ಪಾಶಾಣ ಸೇವಿಸಿ, ಅದೇ ಬಾಯಿಯಲ್ಲಿ ಮನೆಯಲ್ಲಿದ್ದ ಕಲ್ಲಂಗಡಿ ಹಣ್ಣನ್ನು ಸಹ ತಿಂದಿದೆ. ಇದನ್ನ ತಿಳಿಯದೇ ಹಣ್ಣನ್ನು ತಿಂದು ಇಡೀ ಕುಟುಂಬ ಅನಾರೋಗ್ಯಕ್ಕೀಡಾಯಿತು ಎಂಬುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಇಲಿಗೆ ತಂದ ಪಾಶಾಣ ಮಕ್ಕಳ ಪ್ರಾಣವನ್ನೇ ತೆಗೆದು ಬಿಟ್ಟಿದ್ದು ದುರಂತ ಅಲ್ವೇ?

Spread the love
Leave A Reply

Your email address will not be published.

Flash News