ಕೊರೊನಾ ಹೆಚ್ಚಳ: ಬೆಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಿಗೆ 15 ದಿನ ರಜೆ ಘೋಷಣೆ..

0

ಬೆಂಗಳೂರು: ನಗರದಲ್ಲಿ ಕೊರೊನಾ ಹೆಚ್ಚಾದ ಕಾರಣ ಬೆಂಗಳೂರು ವಿಶ್ವವಿದ್ಯಾಲಯ ಮತ್ತು ವಿವಿ ವ್ಯಾಪ್ತಿಯ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ 15 ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಜ್ಯೋತಿ ಆದೇಶಿಸಿದ್ದಾರೆ. ಈ ಮೂಲಕ ಏಪ್ರಿಲ್ 20 ರವರೆಗೂ ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ರಜೆ ನೀಡಿದಂತಾಗಿದೆ. ಅಷ್ಟೇ ಅಲ್ಲದೇ, ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಬರುವ ಹಾಸ್ಟೆಲ್​ಗಳು ಸಹ 15 ದಿನಗಳ ಕಾಲ ಬಂದ್ ಆಗಲಿವೆ. ಹಾಸ್ಟೆಲ್​ನಲ್ಲಿ ವಾಸವಿರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಬಿಟ್ಟು ತೆರಳುವಂತೆ ಸೂಚನೆ ನೀಡಲಾಗಿದೆ. ಬಾಕಿ ಉಳಿದ ವಿಷಯಗಳನ್ನು ಆನ್​ಲೈನ್​ ಮೂಲಕ ಪಾಠ ಮಾಡುವಂತೆ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ. ಆದರೆ, ಪ್ರಾಯೋಗಿಕ ತರಗತಿಗಳು ಮಾತ್ರ ಎಂದಿನಂತೆ ನಡೆಯಲಿವೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.
ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ಆಫ್​ಲೈನ್​ನಲ್ಲೇ ನಡೆಯಲಿದ್ದು, ವಿಶ್ವವಿದ್ಯಾಲಯದ ವ್ಯಾಪ್ತಿಯ ಒಟ್ಟು 20 ವಿದ್ಯಾರ್ಥಿಗಳು ಹಾಗೂ ಪ್ರೊಫೆಸರ್​ಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು  ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಕೆ.ಜ್ಯೋತಿ ತಿಳಿಸಿದ್ದಾರೆ.

Spread the love
Leave A Reply

Your email address will not be published.

Flash News