ರಾಜ್ಯದಲ್ಲಿ ಮುಂದುವರೆದ ‘ಕೊರೊನಾ ಸ್ಪೋಟ..

0

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, . ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6976 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ 35 ಜನರು ಸಾವನ್ನಪ್ಪಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 4991 ಸೇರಿದಂತೆ ರಾಜ್ಯಾಧ್ಯಂತ 6976 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಇದರಿಂದಾಗಿ ಸೋಂಕಿತರ ಸಂಖ್ಯೆ 10,33,560 ಕ್ಕೆ ಏರಿಕೆಯಾಗಿದೆ. ಇಂದು 2794 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು 4991 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,19,508 ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ 25 ಜನರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದು, ಇದುವರೆಗೆ 4718 ಸೋಂಕಿತರು ಮೃತಪಟ್ಟಿದ್ದಾರೆ.

Spread the love
Leave A Reply

Your email address will not be published.

Flash News