ಸಾರಿಗೆ ಮುಷ್ಕರಕ್ಕೆ ಕಾಂಗ್ರೆಸ್​ ಬೆಂಬಲ: ನೌಕರರ ಪರ ದನಿಯೆತ್ತಿದ ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ

0

ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಸಾರಿಗೆ ನಿಗಮಗಳ ಸಿಬ್ಬಂದಿ ಮುಷ್ಕರಕ್ಕೆ ಕಾಂಗ್ರೆಸ್ ನಾಯಕರು ಬೆಂಬಲ ಸೂಚಿಸಿದ್ದಾರೆ. ನಗರದಲ್ಲಿ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ನಾಯಕರಾದ ರಾಮಲಿಂಗಾರೆಡ್ಡಿ ಮತ್ತು ಎಚ್​​.ಎಂ.ರೇವಣ್ಣ ‘ನೌಕರರ ಬೇಡಿಕೆಗಳಿಗೆ ನಮ್ಮ ಸಹಮತವಿದೆ’ ಎಂದು ಹೇಳಿದರು. ಈ ಮೂಲಕ ಸಾರಿಗೆ ನಿಗಮಗಳ ಸಿಬ್ಬಂದಿ ಮುಷ್ಕರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವಿನ​ ಕೆಸರೆರಚಾಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯೂ ಕಾಣಿಸಿದೆ. ನಗರದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ‘6ನೇ ವೇತನ ಆಯೋಗ ಜಾರಿಗಾಗಿ ಸಾರಿಗೆ ನಿಗಮಗಳ ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಸಿಬ್ಬಂದಿಯ ಎಲ್ಲಾ ಬೇಡಿಕೆ ಈಡೇರಿಸಲು ಆಗದಿರಬಹುದು. ಆದರೆ ಮುಷ್ಕರ ನಿರತ ಸಿಬ್ಬಂದಿಯನ್ನು ಕರೆದು ಚರ್ಚೆ ನಡೆಸಬೇಕು. ಅವರನ್ನು ನೌಕರರು ಅನ್ನಬೇಡಿ, ಅವರೂ ವ್ಯವಸ್ಥೆಯ ಭಾಗ,’ ಎಂದು ಹೇಳಿದರು.
ಸಿಬ್ಬಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಸರ್ಕಾರ ಏನನ್ನೂ ಮಾಡಲಾಗಲ್ಲ. ಕಾನೂನು ಇದೆ ಎಂದು ಎಲ್ಲಾ ಕಡೆ ಪ್ರಯೋಗ ಮಾಡಲು ಆಗುವುದಿಲ್ಲ. ಸರ್ಕಾರಕ್ಕೆ ತಾಳ್ಮೆ ಇರಬೇಕು, ತಾಳ್ಮೆ ಮತ್ತು ಸಹಾನುಭೂತಿಯಿಂದ ಪರಿಸ್ಥಿತಿಯನ್ನು ಅವಲೋಕಿಸಿ ನೆರವು ನೀಡಬೇಕು,’ ಎಂದು ಶಿವಕುಮಾರ್ ಸಲಹೆ ನೀಡಿದರು.

Spread the love
Leave A Reply

Your email address will not be published.

Flash News