ಸಾರಿಗೆ ನೌಕರರ ಮುಷ್ಕರಕ್ಕೆ ನಟ ಚೇತನ್ ಫುಲ್ ಸಪೋರ್ಟ್..

0

ಬೆಂಗಳೂರು: ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿರುವ ನಟ ಚೇತನ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸಾರಿಗೆ ನೌಕರರ ಬೇಡಿಕೆ ಇಂದು ನಿನ್ನೆಯದಲ್ಲ. 16 ವರ್ಷಗಳಿಂದ ಬೇಡಿಕೆಯಿಟ್ಟು ಹೋರಾಟ ನಡೆಸುತ್ತಿದ್ದಾರೆ. ನೌಕರರ 8 ಬೇಡಿಕೆ ಈಡೇರಿಸಿದ್ದೇವೆ ಎಂಬ ಸರ್ಕಾರದ ಹೇಳಿಕೆ ಸುಳ್ಳು ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇತನ್, ಸರ್ಕಾರ ಸಾರಿಗೆ ಸಿಬ್ಬಂದಿ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಕರ್ತವ್ಯಕ್ಕೆ ಹಾಜರಾಗದ ನೌಕರರನ್ನು ವಜಾ ಮಾಡಲಾಗುತ್ತಿದೆ. ಮನೆಯಿಂದ ಹೊರ ಹಾಕುವ ಬೆದರಿಕೆ ಹಾಕಲಾಗುತ್ತಿದೆ. ಅನ್ಯಾಯದ ವಿರುದ್ಧ ಹೋರಾಟ ನಡೆಸಿದವರ ವಿರುದ್ಧ ಸರ್ಕಾರದ ಇಂಥಹ ದೋರಣೆ ಜನವಿರೋಧಿಯಾಗಿದೆ ಎಂದು ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ನಾಲ್ಕು ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದೆ. ಒಂದು ವರ್ಷಕ್ಕೆ 1 ಲಕ್ಷ 75 ಸಾವಿರ ಕೋಟಿ ಟ್ಯಾಕ್ಸ್ ಮಾಫಿಯಾ ಮಾಡಿದೆ. ಸಾರಿಗೆ ಮುಷ್ಕರದಿಂದ ಜನರಿಗೆ ತೊಂದರೆಯಾಗುತ್ತಿದೆ. ಅದಕ್ಕೆ ಮೂಲ ಕಾರಣ ಸರ್ಕಾರ ಹೊರತು ಮುಷ್ಕರ ನಿರತ ಸಾರಿಗೆ ಸಿಬ್ಬಂದಿಯಲ್ಲ ಎಂದು ಹೇಳಿದ್ದಾರೆ.

Spread the love
Leave A Reply

Your email address will not be published.

Flash News