ಕರ್ನಾಟಕದಲ್ಲಿ ಇಂದು 10,250 ಮಂದಿಗೆ ಕೊರೊನಾ ಸೋಂಕು, 40 ಸಾವು

0

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ ಒಂದೇ ದಿನ 10,250 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 40 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 12,889 ಕ್ಕೆ ಮುಟ್ಟಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 7584 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 27 ಜನರು ಮೃತಪಟ್ಟಿದ್ದಾರೆ. ಈವರೆಗೆ ಬೆಂಗಳೂರಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 4815ಕ್ಕೆ ಮುಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 10,65,290ಕ್ಕೆ (10.65 ಲಕ್ಷ) ಮುಟ್ಟಿದೆ. ಸೋಂಕಿತರ ಪೈಕಿ 9,83,157 (9.83 ಲಕ್ಷ) ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 69,225 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 7584 ಜನರಿಗೆ ಸೋಂಕು ದೃಢಪಡುವ ಮೂಲಕ ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 4,81,982ಕ್ಕೆ (4.81 ಲಕ್ಷ) ಏರಿಕೆಯಾಗಿದೆ. ಈವರೆಗೆ 4815 ಜನರು ಗುಣಮುಖರಾಗಿದ್ದಾರೆ. 4,81,982 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Spread the love
Leave A Reply

Your email address will not be published.

Flash News