Karnataka SSLC Exam 2021: ಸಿಬಿಎಸ್​ಇ ಪರೀಕ್ಷೆ ರದ್ದಿನಂತೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬಗ್ಗೆ ತಕ್ಷಣಕ್ಕೆ ಯಾವುದೇ ತೀರ್ಮಾನವಿಲ್ಲ: ಸಚಿವ ಸುರೇಶ್ ಕುಮಾರ್

0

ಬೆಂಗಳೂರು: ಕೇಂದ್ರೀಯ CBSE 10ನೇ ತರಗತಿ ಪರೀಕ್ಷೆ ರದ್ದಾದ ಕಾರಣ ರಾಜ್ಯದ SSLC ಪರೀಕ್ಷೆ ಬಗ್ಗೆಯೂ ಕೆಲವು ಊಹಾಪೋಹಗಳು ಹರಿದಾಡುತ್ತಿದ್ದವು. ಆದರೆ ಈ ಕುರಿತು ಶಿಕ್ಷಣ ಸಚಿವ ಎಸ್​.ಸುರೇಶ್ ಕುಮಾರ್ ಅವರೇ ಸ್ವತಃ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ SSLC ಪರೀಕ್ಷೆ ಜೂನ್ 21ರಿಂದ ಪ್ರಾರಂಭವಾಗಲಿದೆ. ಪರೀಕ್ಷೆ ನಡೆಯಲು ಇನ್ನೂ ಸಮಯಾವಕಾಶವಿದೆ. ಹೀಗಾಗಿ CBSE ಪರೀಕ್ಷೆಗಳನ್ನು ರದ್ಧು ಮಾಡಿದಂತೆ ರಾಜ್ಯದ ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಕುರಿತು ಈಗಲೇ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಅವರು ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಕುರಿತು ಯಾವುದೇ ವದಂತಿ, ಊಹಾಪೋಹಗಳಿಗೆ ಕಿವಿಗೊಡದಿರಿ ಎಂದು ಶಿಕ್ಷಣ ಸಚಿವರೇ ಖಚಿತಪಡಿಸಿದಂತಾಗಿದೆ.

ದೇಶದೆಲ್ಲೆಡೆ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆಯಿಂದಾಗಿ ಶೈಕ್ಷಣಿಕ ವಲಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದಾಗಿ ಸಿಬಿಎಸ್​ಇ ಬೋರ್ಡ್​ನ 10 ಮತ್ತು 12ನೇ ತರಗತಿಗಳಿಗೆ ಪರೀಕ್ಷೆಗಳನ್ನು ನಡೆಸುವ ಕುರಿತು ಪ್ರಧಾನಿ ನರೇಂದ್ರ ಮೋದಿ, ಶಿಕ್ಷಣ ಸಚಿವ ರಮೇಶ್​ ಪೋಖ್ರಿಯಾಲ್​ ನಿಶಾಂಕ್​ ಹಾಗೂ ಶಿಕ್ಷಣ ಇಲಾಖೆಯ ಪ್ರಮುಖರು ಸಭೆ ನಡೆಸಿದ್ದರು. ವಿವಿಧ ರಾಜ್ಯಗಳ ಅಭಿಪ್ರಾಯವನ್ನು ಸಂಗ್ರಹಿಸಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿ, 12ನೇ ತರಗತಿ ಪರೀಕ್ಷೆಯ ದಿನಾಂಕ ಮುಂದೂಡಿ ಇಂದು ಬೆಳಗ್ಗೆ ಆದೇಶ ಹೊರಡಿಸಲಾಗಿತ್ತು. ಈ ಸಂದರ್ಭ ವಿದ್ಯಾರ್ಥಿಗಳ ಹಿತರಕ್ಷಣೆ ಮುಖ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾಗಿ ತಿಳಿದುಬಂದಿತ್ತು.

Spread the love
Leave A Reply

Your email address will not be published.

Flash News