ಸಾರಿಗೆ ನೌಕರರ ಮುಷ್ಕರದಿಂದ ರಾಜ್ಯ ಸರ್ಕಾರಕ್ಕೆ 152 ಕೋಟಿ ನಷ್ಟ..

0

ಬೆಂಗಳೂರು: ಸಾರಿಗೆ ನಿಗಮದ ನೌಕರರ ಮುಷ್ಕರ ಇಂದಿಗೆ ಎಂಟನೇ ದಿನಕ್ಕೆ ಕಾಲಿಟ್ಟಿದೆ, ಏಪ್ರಿಲ್ 7 ರಿಂದ ಸರಕಾರಿ ಬಸ್ ಗಳು ರಸ್ತೆಗಿಳಿದಿಲ್ಲ. ಈ ಮುಷ್ಕರದಿಂದ ರಾಜ್ಯ ಸರ್ಕಾರಕ್ಕೆ ಒಟ್ಟು 152 ಕೋಟಿ ರೂಪಾಯಿ ನಷ್ಟವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 70 ಕೋಟಿ ರೂ., ಬೆಂಗಳೂರು ಮಹಾನಗರ ಸಾರಿಗೆ ನಿಗಮ – 20 ಕೋಟಿ ರೂ., ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ – 30.5 ಕೋಟಿ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ – 31.5 ಕೋಟಿ ರೂ. ನಷ್ಟವಾಗಿದೆ ಎಂದು ರಾಜ್ಯ ಸಾರಿಗೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ನಾಲ್ಕು ನಿಗಮಗಳಲ್ಲಿನ ಒಟ್ಟು 17,000 ಬಸ್‌ಗಳಿವೆ. ಇದರಲ್ಲಿ ಕೆಎಸ್‌ಆರ್‌ಟಿಸಿಯಲ್ಲಿ 1,572 ಮತ್ತು ಬಿಎಂಟಿಸಿ 394 ಬಸ್‌ಗಳು ಸೇರಿದಂತೆ ಒಟ್ಟು 3,024 ಬಸ್‌ಗಳನ್ನು ಸಾರಿಗೆ ಇಲಾಖೆ ನಿರ್ವಹಿಸುತ್ತಿದೆ.

ಮುಷ್ಕರ ಕೈ ಬಿಟ್ಟು ನೌಕರರು ಕೆಲಸಕ್ಕೆ ಮರಳದಿದ್ದರೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಸರ್ಕಾರ ಎಚ್ಚರಿಸಿದೆ.
ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಈಗಾಗಲೇ ಹಲವಾರು ತರಬೇತಿನಿರತ ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಮುಷ್ಕರ ನಿರತ ನೌಕರರ ಯಾವುದೇ ಬೇಡಿಕೆಗಳನ್ನು ಸ್ವೀಕರಿಸಲು ಸರ್ಕಾರ ಸಿದ್ದವಿಲ್ಲ ಮತ್ತು ಅವರ ವಿರುದ್ಧ ಕಠಿಣ ಕ್ರಮಗಳನ್ನೂ ಕೈಗೊಳ್ಳುವ ಎಚ್ಚರಿಕೆ ನೀಡಿದೆ ಎಂದು ಸಿಎಂ ಬಿಎಸ್ ಯಡಿಯುರಪ್ಪ ಕಾದ ಖಂಡಿತವಾಗಿ ಹೇಳಿದ್ದಾರೆ.

Spread the love
Leave A Reply

Your email address will not be published.

Flash News