ವಿಕ್ರಾಂತ್ ರೋಣ ರಿಲೀಸ್​ ಡೇಟ್ ಪ್ರಕಟ..

0

ಬೆಂಗಳೂರು:  ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ ‘ವಿಕ್ರಾಂತ್‌ ರೋಣ’ ಚಿತ್ರದ ಬಿಡುಗಡೆ ದಿನಾಂಕ ಪ್ರಕಟವಾಗಿದೆ.

ಹೌದು.. ಸುದೀಪ್‌ ನಟನೆಯ ಪ್ಯಾನ್ ಇಂಡಿಯಾ ಚಿತ್ರ ‘ವಿಕ್ರಾಂತ್‌ ರೋಣ’ ಮುಂಬರುವ ಆಗಸ್ಟ್‌ 19ರಂದು ತೆರೆಗೆ ಬರಲಿದೆ. ಈ ಕುರಿತು ಸ್ವತಃ ಸುದೀಪ್ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದು, ‘ವಿಕ್ರಾಂತ್ ರೋಣ’ ಸಿನಿಮಾದ ಚಿತ್ರೀಕರಣ ಸಿದ್ದತೆ ಮತ್ತು ಪ್ರಕ್ರಿಯೆಯ ಆನಂದವನ್ನು ಅನುಭವಿಸಿದ ನಂತರ ಈಗ ‘ರೋಮಾಂಚನಕಾರಿ’ ಸುದ್ದಿಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಸಮಯ! ವಿಕ್ರಾಂತ್ ರೋಣ ಸಿನಿಮಾ ಆಗಸ್ಟ್ 19 ರಂದು ಭಾರತದಾದ್ಯಂತ ಬಿಡುಗಡೆಗೊಳ್ಳುತ್ತಿದೆ ಎಂದು ತಿಳಿಸಲು ನಮ್ಮ ವಿಕ್ರಾಂತ್ ರೋಣ ತಂಡವು ಹರ್ಷಿಸುತ್ತದೆ’ ಎಂದು ಪೋಸ್ಟ್‌ ಮಾಡಿದ್ದಾರೆ.

Spread the love
Leave A Reply

Your email address will not be published.

Flash News