ಕರ್ನಾಟಕದಲ್ಲಿ ಇಂದು ಹೊಸದಾಗಿ 14,738 ಜನರಿಗೆ ಕೊರೊನಾ ಸೋಂಕು

0

ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 14,738 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 11,09,650ಕ್ಕೆ (11.09 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 66 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,112 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 9,99,958 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 96,561 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ, ಕಲಬುರ್ಗಿ ಮತ್ತು ಬೀದರ್​ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿರುವುದು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅಂಕಿಅಂಶಗಳನ್ನು ಗಮನಿಸಿದಾಗ ತಿಳಿಯುತ್ತದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 10,497 ಜನರಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,12,521ಕ್ಕೆ (5.12 ಲಕ್ಷ) ಏರಿಕೆಯಾಗಿದೆ. ಈ ಪೈಕಿ 4,35,730 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 30 ಜನರು ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 4,963 ಜನರ ಸಾವನ್ನಪ್ಪಿದ್ದಾರೆ. 71,827 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಒಟ್ಟು 66 ಜನರ ಸಾವನ್ನಪ್ಪಿದ್ದಾರೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ 30 ಜನರು ಮೃತಪಟ್ಟಿದ್ದಾರೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಲಾ 6, ಮೈಸೂರು ಜಿಲ್ಲೆಯಲ್ಲಿ 5, ಹಾಸನದಲ್ಲಿ 4, ಧಾರವಾಡ ಜಿಲ್ಲೆಯಲ್ಲಿ 3, ಬೀದರ್, ತುಮಕೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಇಬ್ಬರು, ಬೆಳಗಾವಿ, ಕಲಬುರಗಿ, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಬ್ವರು ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,112 ಜನರ ಸಾವನ್ನಪ್ಪಿದ್ದಾರೆ.

Spread the love
Leave A Reply

Your email address will not be published.

Flash News