ಕೊರೊನಾ ಕಷ್ಟ ಕಾಲದಲ್ಲೂ ಸಾರಿಗೆ ಮುಷ್ಕರ ಬೇಕಿತ್ತಾ..?

0

ಬೆಂಗಳೂರು: ಕೊರೊನಾ ಸಾಂಕ್ರಾಮಿಕ ರೋಗ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಸಾರಿಗೆ ಮುಷ್ಕರ ಮುಂದುವರಿಸುತ್ತಿರುವುದು ಸೂಕ್ತವೆ? ರಾಜ್ಯದಲ್ಲಿ ಕೊರೊನಾ ತನ್ನ ಕಬಂಧಬಾಹುವನ್ನು ಚಾಚುತ್ತಲೇ ಇದೆ. ಎರಡನೆ ಅಲೆಯ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಸೋಂಕಿತರ ಸಂಖ್ಯೆ 15 ಸಾವಿರಕ್ಕೆ ಏರಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 10 ಸಾವಿರ ದಾಟುತ್ತಿದೆ. ಸಾವಿನ ಆರ್ಭಟ ಹೆಚ್ಚಾಗುತ್ತಿದೆ. ಆಸ್ಪತ್ರೆಗಳು ಸೋಂಕಿತರಿಂದ ತುಂಬುತ್ತಿವೆ. ಚಿತಾಗಾರಗಳಲ್ಲಿ ಶವಗಳನ್ನು ಸುಡಲು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಪರಿಸ್ಥಿತಿ ನಿಯಂತ್ರಿಸಲು ಸರ್ಕಾರ ಹರಸಾಹಸ ಪಡುತ್ತಿದೆ. ಇಂತಹ ಸಂದರ್ಭದಲ್ಲಿ ಅಗತ್ಯ ಸೇವೆಯಾದ ಸಾರಿಗೆಯನ್ನು ಸಂಪೂರ್ಣ ಸ್ತಬ್ಧಗೊಳಿಸಿ ಸಾರ್ವಜನಿಕರಿಗೆ, ಸರ್ಕಾರಕ್ಕೆ ಸಂಕಷ್ಟ ತಂದೊಡ್ಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಾರ್ವಜನಿಕವಾಗಿ ಕೇಳಿಬರುತ್ತಿದೆ.

Spread the love
Leave A Reply

Your email address will not be published.

Flash News