ಕನ್ನಡ ಸಾಹಿತ್ಯ ಲೋಕದ ನಿಘಂಟು “ವೆಂಕಟ ಸುಬ್ಬಯ್ಯ” ವಿಧಿವಶ

0

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕನ್ನಡ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ (107) ಅವರು ತಡರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿ. ವೆಂಕಟಸುಬ್ಬಯ್ಯ ತಡರಾತ್ರಿ 1.30 ರ ಸುಮಾರಿಗೆ ನಿಧನರಾಗಿದ್ದಾರೆ. ಕನ್ನಡದ ನಿಘಂಟುಶಾಸ್ತ್ರ, ಪ್ರಾಚೀನ ಸಾಹಿತ್ಯ ಅಧ್ಯಯನ, ಅನುವಾದ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಇವರ ಭಾಷಾ ಸಾಹಿತ್ಯ ಸಾಧನೆಗೆ 2005ರಲ್ಲಿ, ಹಂಪೆ ವಿಶ್ವವಿದ್ಯಾಲಯವು ಇವರಿಗೆ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನಿತ್ತು ಗೌರವಿಸಿದೆ. ಇವರು ಬೆಂಗಳೂರಿನಲ್ಲಿ ನಡೆದ 77ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
1913ರಲ್ಲಿ ಮೈಸೂರಿನಲ್ಲಿ ಜನಿಸಿದ ಇವರು, ಮೈಸೂರಿನಲ್ಲಿಯೆ ಬೆಳೆದವರು. ಇವರ ತಂದೆ ಗಂಜಾಂ ತಿಮ್ಮಣ್ಣನವರು ಸಂಸ್ಕೃತ ಹಾಗು ಕನ್ನಡದ ವಿದ್ವಾಂಸರಾಗಿದ್ದರು. 1937ರಲ್ಲಿ ಮೈಸೂರು ಮಹಾರಾಜ ಕಾಲೇಜಿನಿಂದ ಎಂ.ಎ. ಪದವಿಯನ್ನು ಪಡೆದ ಇವರಿಗೆ ಪ್ರಥಮ ಸ್ಥಾನ ಪಡೆದದ್ದಕ್ಕಾಗಿ ಸುವರ್ಣಪದಕವನ್ನು ಬಹುಮಾನವಾಗಿ ಕೊಡಲಾಯಿತು. ಮುಂದೆ ಇವರು ಬಿ.ಟಿ. ಪದವಿಯನ್ನೂ ಕೂಡ ಪಡೆದರು. 1939 ರಿಂದ ಪ್ರಾರಂಭಿಸಿ ಸುಮಾರು 40 ವರ್ಷಗಳ ಕಾಲ ಇವರು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವರು

ಪ್ರಶಸ್ತಿಗಳು

ಕನ್ನಡ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ
ಪಂಪ ಪ್ರಶಸ್ತಿ
ನಾಡೋಜಾ ಪ್ರಶಸ್ತಿ
ಪದ್ಮಶ್ರೀ ಪ್ರಶಸ್ತಿ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ.
1974 ರಲ್ಲಿ ಬೀದರನಲ್ಲಿ ನಡೆದ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
2011ರಲ್ಲಿ ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ 77ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
2014 ನೇ ಸಾಲಿನ ಪಂಪ ಪ್ರಶಸ್ತಿ
2018 ‘ಭಾಷಾ ಸಮ್ಮಾನ್‌’ (ಕೇಂದ್ರ ಸಾಹಿತ್ಯ ಅಕಾಡೆಮಿ)

Spread the love
Leave A Reply

Your email address will not be published.

Flash News