ವೇಗವಾಗಿ ಆಕ್ಸಿಜನ್ ಪೂರೈಕೆ ಮಾಡುವಂತೆ ಉನ್ನತ ಮಟ್ಟದ ಸಭೆಯಲ್ಲಿ ಸೂಚನೆ ನೀಡಿದ ಪ್ರಧಾನಿ ಮೋದಿ

0

ದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಕೊವಿಡ್ ಸೊಂಕಿತರ ಚಿಕಿತ್ಸೆಗೆ ವೈದ್ಯಕೀಯ ಆಮ್ಲಜನಕದ ಪೂರೈಕೆಯ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ, ವೇಗವಾಗಿ ವಿತರಿಸುವ ಬಗೆ ಮತ್ತು ಅಗತ್ಯ ರೋಗಿಗಳಿಗೆ ಈ ಸೌಲಭ್ಯವನ್ನು ಸುಲಭವಾಗಿ ದೊರೆಯುವಂತೆ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಸೂಚಿಸಿದರು. ವೈದ್ಯಕೀಯ ಆಮ್ಲಜನಕವನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ಅಧಿಕಾರಿಗಳು ಕೆಲ ವಾರಗಳಿಂದ ವೈದ್ಯಕೀಯ ಆಮ್ಲಜನಕ ಪೂರೈಕೆಗೆ ಕೈಗೊಂಡ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿಗೆ ಮನವರಿಕೆ ಮಾಡಿಕೊಟ್ಟರು.

ಪಿಎಂ ಪ್ರಧಾನ ಕಾರ್ಯದರ್ಶಿ, ಸಂಪುಟ ಕಾರ್ಯದರ್ಶಿ, ಆರೋಗ್ಯ ಇಲಾಖೆ ಕಾರ್ಯದರ್ಶಿ ಮತ್ತಿತರ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆಯಲ್ಲಿ ದೇಶದ ಆಸ್ಪತ್ರೆಗಳಿಗೆ ಶೀಘ್ರ ಮೆಡಿಕಲ್ ಆಕ್ಸಿಜನ್ ಪೂರೈಕೆಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ವೇಗವಾಗಿ ಆಕ್ಸಿಜನ್ ಪೂರೈಕೆ ಅಗತ್ಯವಾಗಿದೆ. ಮೆಡಿಕಲ್ ಆಕ್ಸಿಜನ್​ಗಳ ಖಾಲಿ ಟ್ಯಾಂಕರ್​ಗಳನ್ನು ಏರ್ ಲಿಫ್ಟ್ ಮೂಲಕ ಸಾಗಾಟ ಮಾಡಲು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Spread the love
Leave A Reply

Your email address will not be published.

Flash News