ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿರುವ ಜಿಲ್ಲೆ ಬೆಂಗಳೂರು..!

0

ಬೆಂಗಳೂರು: ಭಾರತದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ನಿರೀಕ್ಷೆಗೂ ಮೀರಿ ಹಬ್ಬುತ್ತಿದ್ದು, ಕಳೆದ ಒಂದು ದಿನದಲ್ಲಿ 3.46 ಲಕ್ಷ ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಮೂರು ದಿನಗಳ ಅವಧಿಯಲ್ಲಿ ದಾಖಲಾದ ಒಟ್ಟು ಸೋಂಕಿತರ ಪ್ರಮಾಣ 9.94ಲಕ್ಷಕ್ಕೇರಿದ್ದು 10 ಲಕ್ಷದತ್ತ ಸಾಗಿದೆ. ಅಲ್ಲದೇ ಶುಕ್ರವಾರ (ಏಪ್ರಿಲ್ 24) ಸಹ ದೇಶದಲ್ಲಿ 2,000ಕ್ಕೂ ಅಧಿಕ ಮಂದಿ ಸೋಂಕಿತರು ಸಾವಿಗೀಡಾಗಿದ್ದು, ಸತತ ನಾಲ್ಕನೇ ದಿನ ಸೋಂಕಿತರ ಪ್ರಮಾಣ 2 ಸಾವಿರದ ಗಡಿ ದಾಟಿದೆ. ದೇಶದಲ್ಲಿ ಅತಿ ಹೆಚ್ಚು ಸಕ್ರಿಯ ಸೋಂಕಿತರನ್ನು ಹೊಂದಿದ ಜಿಲ್ಲೆಯಾಗಿ ಬೆಂಗಳೂರು ನಗರ ಗುರುತಿಸಿಕೊಂಡಿದ್ದು, ನಿನ್ನೆ  1 ಲಕ್ಷದ 49 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ನಗರದಲ್ಲಿರುವುದಾಗಿ ಅಂಕಿ ಅಂಶಗಳು ತಿಳಿಸಿವೆ. ಬೆಂಗಳೂರಿನಲ್ಲಿ ನಿನ್ನೆ 16,662 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುವ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 1,49,624ಕ್ಕೆ ತಲುಪಿದೆ. ಬೆಂಗಳೂರಿನ ನಂತರ ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆ ಪುಣೆ ಆಗಿದ್ದು 1.1 ಲಕ್ಷ ಪ್ರಕರಣಗಳು ಕಾಣಿಸಿಕೊಂಡಿವೆ. ಅಲ್ಲದೇ ಬೆಂಗಳೂರು, ಪುಣೆ ಹೊರತುಪಡಿಸಿದರೆ ಭಾರತದ ಮಿಕ್ಕೆಲ್ಲಾ ಜಿಲ್ಲೆಗಳು 1 ಲಕ್ಷಕ್ಕೂ ಕಡಿಮೆ ಸಕ್ರಿಯ ಪ್ರಕರಣಗಳನ್ನು ಹೊಂದಿವೆ. ದೆಹಲಿ 1 ಲಕ್ಷದ ಸಮೀಪದಲ್ಲಿದ್ದು, ಮುಂಬೈ 81,174 ಸಕ್ರಿಯ ಪ್ರಕರಣಗಳನ್ನು ಹೊಂದಿದೆ.

Spread the love
Leave A Reply

Your email address will not be published.

Flash News