ಕೊರೊನಾ ಕರ್ಫ್ಯೂ ಹೊಸ ಮಾರ್ಗಸೂಚಿ ಬಿಡುಗಡೆ: ಏನಿರುತ್ತೆ? ಏನಿರಲ್ಲ?

0

ಬೆಂಗಳೂರು: ರಾಜ್ಯದಲ್ಲಿ ಕೊರನಾ ಸೋಂಕಿನ 2ನೇ ಅಲೆಗೆ ಕಡಿವಾಣ ಹಾಕಲೆಂದು ರಾಜ್ಯ ಸರ್ಕಾರವು ಸೋಮವಾರ 14 ದಿನಗಳ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಮಧ್ಯಾಹ್ನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಾಕ್​ಡೌನ್ ನಿರ್ಬಂಧದ ವಿವರಗಳನ್ನು ಮಾಧ್ಯಮಗೋಷ್ಠಿಯಲ್ಲಿ ನೀಡಿದ್ದರು. ಈ ವೇಳೆ ಅವರು ‘ಸಂಜೆಯ ಹೊತ್ತಿಗೆ ಮುಖ್ಯಕಾರ್ಯದರ್ಶಿಗಳು ವಿಸ್ತೃತ ಆದೇಶ ಹೊರಡಿಸುತ್ತಾರೆ’ ಎಂದು ಹೇಳಿದ್ದರು. ಅದರಂತೆ ಈಗ ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕೊವಿಡ್ ಸೋಂಕು ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿಯ ಸರ್ಕಾರಿ ಆದೇಶ ಹೊರಡಿಸಿದ್ದಾರೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ ಹೊರಡಿಸಿರುವ ಈ ಮಾರ್ಗಸೂಚಿಯು ಏಪ್ರಿಲ್ 27ರ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಹೊಸ ಮಾರ್ಗಸೂಚಿಯ ಅನ್ವಯ ರಾಜ್ಯದಲ್ಲಿ ಲಭ್ಯವಿರುವ ಸೇವೆಗಳು ಮತ್ತು ನಿಷೇಧಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಗತ್ಯ ಸೇವೆಗೆ ಸೀಮಿತ ಅವಧಿ– ಬೆಳಗ್ಗೆ 6ರಿಂದ 10 ಗಂಟೆವರೆಗೆ ಅಗತ್ಯಸೇವೆಯ ಅಂಗಡಿಗಳು ತೆರೆಯಬಹುದು
– ದಿನಸಿ, ಹಣ್ಣು-ತರಕಾರಿ, ಮೀನು ಮಾಂಸ ಅಂಗಡಿ ತೆರೆಯಲು ಅವಕಾಶ‌
– ಮದ್ಯಂದಗಡಿಗಳು ಬೆಳಗ್ಗೆ 6ರಿಂದ 10ಗಂಟೆವರೆಗೆ ಮಾತ್ರ ಓಪನ್
ಬಾರ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ
– ಕೃಷಿ ಸಂಬಂಧಿಸಿದ ಚಟುವಟಿಕೆಗೆ ಯಾವುದೇ ನಿರ್ಬಂಧವಿಲ್ಲ
– ಬ್ಯಾಂಕ್, ಇ-ಕಾಮರ್ಸ್​ ಸೇವೆಗಳಿಗೆ ನಿರ್ಬಂಧ ಇರುವುದಿಲ್ಲ

ಸಂಚಾರ ವಿವರ – ಏರ್‌ಪೋರ್ಟ್‌ ಬಸ್‌, ಟ್ಯಾಕ್ಸಿಗಳಿಗೆ ಷರತ್ತುಬದ್ಧ ಅವಕಾಶ
– ಟ್ರಾವೆಲ್‌ ದಾಖಲಾತಿ, ಟಿಕೆಟ್ ತೋರಿಸುವುದು ಕಡ್ಡಾಯ
– ತುರ್ತು ಸೇವೆಗೆ ಮಾತ್ರ ಆಟೋ, ಟ್ಯಾಕ್ಸಿಗೆ ಅವಕಾಶ
– ಮೇ 12ರವರೆಗೆ ಮೆಟ್ರೋ ಸಂಚಾರ ಸಂಪೂರ್ಣ ಬಂದ್
– ಅಂತಾರಾಜ್ಯ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ
– ಅಂತರ್ ಜಿಲ್ಲಾ, ಅಂತರ್ ರಾಜ್ಯ ತುರ್ತು ಸೇವೆಗೆ ಮಾತ್ರ ಅವಕಾಶ

ವಿದ್ಯಾರ್ಥಿ ಸಂಚಾರ – ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಂಚಾರಕ್ಕೆ ಅವಕಾಶವಿದೆ
– ಅಡ್ಮಿಷನ್ ಟಿಕೆಟ್‌ ತೋರಿಸಿ ಸಂಚಾರಿಸಬಹುದು.
– ಆಟೋ, ಟ್ಯಾಕ್ಸಿಯಲ್ಲಿ ವಿದ್ಯಾರ್ಥಿಗಳು ಸಂಚರಿಸಲು ಅನುಮತಿಯಿದೆ.

ಮದುವೆಗೆ 50 ಮಂದಿ  – ಮದುವೆ ಕಾರ್ಯಕ್ರಮದಲ್ಲಿ 50 ಜನರು ಮಾತ್ರ ಪಾಲ್ಗೊಳ್ಳಬಹುದು. ಅಂತ್ಯಕ್ರಿಯೆಯಲ್ಲಿ ಕೇವಲ ಐವರು ಮಾತ್ರ ಭಾಗಿ ಆಗಬೇಕು. ಈ ವಿಚಾರವನ್ನು ಕಟ್ಟುನಿಟ್ಟಾಗಿ ಗಮನಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಇವೆಲ್ಲಾ ಬಂದ್ – ರಾಜ್ಯದಲ್ಲಿ ಎಲ್ಲ ಶಾಲಾ ಕಾಲೇಜುಗಳನ್ನು ಮುಚ್ಚಲು ಆದೇಶ
– ಸಿನಿಮಾ ಹಾಲ್, ಶಾಪಿಂಗ್ ಮಾಲ್, ಜಿಮ್, ಯೋಗ ಕೇಂದ್ರ
– ಸ್ಪಾ, ಮನರಂಜನಾ ಕೇಂದ್ರ, ಸಮುದಾಯ ಭವನಗಳನ್ನು ಬಂದ್​ ಮಾಡಲು ಆದೇಶ
– ಸ್ಟೇಡಿಯಂ, ಆಟದ ಮೈದಾನ, ಕ್ರೀಡಾ ಸಂಕೀರ್ಣ, ಜಿಮ್​ಗಳು ತೆರೆಯುವಂತಿಲ್ಲ.

ಸಾಮಾಜಿಕ ಬದುಕಿಗೆ ಕಡಿವಾಣ – ಸಾಮಾಜಿಕ, ಧಾರ್ಮಿಕ, ಕ್ರೀಡಾ, ಮನರಂಜನಾ, ಸಾಂಸ್ಕೃತಿಕ, ರಾಜಕೀಯ ಚಟುವಟಿಕೆಗೆ ಸಂಪೂರ್ಣ ನಿರ್ಬಂಧ
– ಮಂದಿರ, ಮಸೀದಿ, ಚರ್ಚ್​ಗಳಿಗೆ ಜನರು ಪ್ರವೇಶಿಸುವಂತಿಲ್ಲ. ಪೂಜಾರಿಗಳು ಮಾತ್ರ ಸಂಪ್ರದಾಯದಂತೆ ಸರಳ ಪೂಜೆ ಮಾಡಬಹುದು.
– ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ದರ್ಶಿನಿಗಳಲ್ಲಿ ಪಾರ್ಸೆಲ್​ಗೆ ಮಾತ್ರ ಅವಕಾಶ

Spread the love
Leave A Reply

Your email address will not be published.

Flash News