ನಟ ಕೋಮಲ್​ಗೆ ಕೊರೊನಾ; ರಹಸ್ಯವಾಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ ಜಗ್ಗೇಶ್

0

ಕೊರೊನಾ ವೈರಸ್​ ಎರಡನೇ ಅಲೆಗೆ ಜನಸಾಮಾನ್ಯರು ಮಾತ್ರವಲ್ಲದೆ ಸೆಲೆಬ್ರಿಟಿಗಳು ಕೂಡ ಯಾತನೆ ಅನುಭವಿಸುವಂತಾಗಿದೆ. ಅನೇಕಕಲಾವಿದರು ಕೊವಿಡ್​ ಸೋಂಕಿಗೆ ಒಳಗಾಗಿ ಕಷ್ಟಪಡುತ್ತಿದ್ದಾರೆ. ಸೋಮವಾರವಷ್ಟೇ (ಏ.26) ನಿರ್ಮಾಪಕ ಕೋಟಿ ರಾಮು ಕೊರೊನಾ ವೈರಸ್​ಗೆ ಬಲಿ ಆಗಿದ್ದಾರೆ. ಸ್ಯಾಂಡಲ್​ವುಡ್​ನ ಖ್ಯಾತ ನಟ ಕೋಮಲ್​ ಕುಮಾರ್​ ಅವರಿಗೂ ಈ ಮಹಾಮಾರಿ ತಗುಲಿತ್ತು. ಆದರೆ ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.ಕೋಮಲ್​ ಅಣ್ಣ ಜಗ್ಗೇಶ್​ ಅವರು ಈ ವಿಚಾರವನ್ನು ಸೋಶಿಯಲ್​ ಮೀಡಿಯಾ ಮೂಲಕ ಬಹಿರಂಗ ಪಡಿಸಿದ್ದಾರೆ. ಅಚ್ಚರಿ ಏನೆಂದರೆ, ಹಲವು ದಿನಗಳ ಹಿಂದೆಯೇ ಕೋಮಲ್​ ಅವರಿಗೆ ಕೊರೊನಾ ಪಾಸಿಟಿವ್​ ಆಗಿತ್ತು. ಆದರೆ ಈ ವಿಷಯವನ್ನು ಜಗ್ಗೇಶ್​ ಮುಚ್ಚಿಟ್ಟಿದ್ದರು. ಯಾರಿಗೂ ಗೊತ್ತಾಗದಂತೆ ರಹಸ್ಯವಾಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಂತೂ ಕೋಮಲ್​ ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿಯನ್ನು ಈಗ ಜಗ್ಗೇಶ್​ ಹಂಚಿಕೊಂಡಿದ್ದಾರೆ.ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು ಸ್ವಂತ ವ್ಯವಹಾರವನ್ನು ಬೆಂಗಳೂರಿನ ಕಾರ್ಪೊರೇಷನ್​ನಲ್ಲಿ ಶುರುಮಾಡಿ ಯಶಸ್ವಿಯಾದ. ಆದರೆ ಇತ್ತೀಚೆಗೆ ತನಗೆ ಬರಬೇಕಾದ ಬಿಲ್​ಗೆ ಅಲ್ಲಿನ ಕೆಲ ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು. ಅದನ್ನು ಪಡೆಯಲು ದಿನ ಓಡಾಡುತ್ತಿದ್ದ ತಮ್ಮನಿಗೆ ಕೊರೊನಾ ಮಾರಿ ಮೈಸೇರಿ ತುಂಬ ಸೀರಿಯಸ್​ ಆಗಿಬಿಟ್ಟ. ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ. ಅವನಿಗೆ ಸಹಾಯ ಮಾಡಿದ ಡಾ. ಮಧುಮತಿ, ನಾದನಿ ಡಾ. ಲಲಿತಾ, ನರ್ಸಗಳ ಪಾದಕ್ಕೆ ನನ್ನ ನಮನ’ ಎಂದು ಜಗ್ಗೇಶ್​ ಟ್ವೀಟ್​ ಮಾಡಿದ್ದಾರೆ.

Spread the love
Leave A Reply

Your email address will not be published.

Flash News